ಲಂಡನ್: ಭಾರತ ಕ್ರಿಕೆಟ್ ತಂಡದ ಕೋಚ್ ರವಿಶಾಸ್ತ್ರಿ ಅವರಿಗೆ ಆರ್–ಟಿ ಪಿಸಿಆರ್ ಪರೀಕ್ಷೆಯಲ್ಲೂ ಕೋವಿಡ್ ಖಚಿತವಾಗಿದ್ದು ಕನಿಷ್ಠ 10 ದಿನ ಪ್ರತ್ಯೇಕವಾಸದಲ್ಲಿರಬೇಕಾಗಿದೆ. ಹೀಗಾಗಿ ಮ್ಯಾಂಚೆಸ್ಟರ್ ಟೆಸ್ಟ್ಗೆ ಅವರು ಭಾರತ ತಂಡದೊಂದಿಗೆ ಇರುವುದಿಲ್ಲ.

ಭಾನುವಾರ ನಡೆಸಿದ ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಯಲ್ಲಿ 59 ವರ್ಷದ ರವಿಶಾಸ್ತ್ರಿ ಅವರಿಗೆ ಕೋವಿಡ್ ಇರುವುದು ಖಚಿತವಾಗಿತ್ತು. ಭಾನುವಾರ ಮತ್ತು ಸೋಮವಾರ ಅವರನ್ನು ಆರ್ಟಿ–ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿದೆ. ಸೆಪ್ಟೆಂಬರ್ 10ರಂದು ಐದನೇ ಮತ್ತು ಕೊನೆಯ ಟೆಸ್ಟ್ ಪಂದ್ಯ ಆರಂಭವಾಗಲಿದೆ.

ರವಿಶಾಸ್ತ್ರಿ ಅವರ ಸಂಪರ್ಕದಲ್ಲಿದ್ದ ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್.ಶ್ರೀಧರ್ ಮತ್ತು ಫಿಸಿಯೊಥೆರಪಿಸ್ಟ್ ನಿತಿನ್ ಪಟೇಲ್ ಕೂಡ ಪ್ರತ್ಯೇಕವಾಸದಲ್ಲಿರುವರು ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.