ನವದೆಹಲಿ: ಈ ಬಾರಿಯ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಕ್ರಿಕೆಟ್ ತಂಡಕ್ಕೆ ಅನುಭವಿ ಬ್ಯಾಟರ್ ಶಿಖರ್ ಧವನ್ ನಾಯಕರಾಗಲಿದ್ದು, ವಿ.ವಿ.ಎಸ್. ಲಕ್ಷ್ಮಣ್ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಸುದ್ದಿಸಂಸ್ಥೆ 'ಎಎನ್ಐ' ವರದಿ ಮಾಡಿದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಏಷ್ಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಪುರುಷರ ಹಾಗೂ ಮಹಿಳೆಯರ ತಂಡಗಳನ್ನು ಕಳುಹಿಸಲು ಇದೇ ಮೊದಲ ಬಾರಿಗೆ ಒಪ್ಪಿಗೆ ಸೂಚಿಸಿದೆ ಮೂಲಗಳು ತಿಳಿಸಿರುವುದಾಗಿ ಎಎನ್ಐ ಉಲ್ಲೇಖಿಸಿದೆ.

ಏಷ್ಯನ್ ಗೇಮ್ಸ್ ಕ್ರೀಡಾಕೂಟವು ಚೀನಾದ ಹಾಂಗ್ಡೋ ನಗರದಲ್ಲಿ ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 8ರ ವರೆಗೆ ನಡೆಯಲಿದೆ.

ಏಷ್ಯನ್ ಗೇಮ್ಸ್ ಕ್ರೀಡಾಕೂಟವು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ವ್ಯಾಪ್ತಿಗೆ ಬರುವುದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.