ಚೆನ್ನೈ: ಹೃದಯದಲ್ಲಿ ನೋವು ಕಾಣಿಸಿಕೊಂಡು ಭಾನುವಾರ ಆ್ಯಂಜಿಯೊಪ್ಲಾಸ್ಟಿಗೆ ಒಳಗಾಗಿರುವ ಶ್ರೀಲಂಕಾದ ಆಫ್ ಸ್ಪಿನ್ ದಿಗ್ಗಜ ಮುತ್ತಯ್ಯ ಮುರಳೀಧರನ್, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಮುರಳೀಧರನ್ ಸಹಜ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆಎಂದು ತಿಳಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಬೌಲಿಂಗ್ ಕೋಚ್ ಆಗಿರುವ ಮುರಳೀಧರನ್ ಅವರಿಗೆ ಸ್ಟಂಟ್ ಆಳವಡಿಸಲಾಗಿದೆ.

ಇದನ್ನೂ ಓದಿ:ಮುತ್ತಯ್ಯ ಮುರಳೀಧರನ್ಗೆ ಆ್ಯಂಜಿಯೊಪ್ಲಾಸ್ಟಿ

ಭಾನುವಾರ ಚೆನ್ನೈನ ಗ್ರೀಮ್ಸ್ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಗೆ ಮುರಳೀಧರನ್ ಅವರನ್ನು ದಾಖಲಿಸಲಾಗಿತ್ತು. ಡಾ. ಜಿ ಸೆಂಗೊಟುವೇಲು ಅವರ ನೇತೃತ್ವದ ವೈದ್ಯಕೀಯ ತಂಡವು ಆ್ಯಂಜಿಯೊಪ್ಲಾಸ್ಟಿ ನಡೆಸಿದೆ ಎಂದು ಸೋಮವಾರ ಬಿಡುಗಡೆ ಮಾಡಿರುವ ವೈದ್ಯಕೀಯ ಬುಲೆಟಿನ್ನಲ್ಲಿ ತಿಳಿಸಲಾಗಿದೆ.

ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಮುತ್ತಯ್ಯ ಮುರಳೀಧರನ್ ಹೆಸರಲ್ಲಿದೆ. 133 ಟೆಸ್ಟ್ ಪಂದ್ಯಗಳಲ್ಲಿ ದಾಖಲೆಯ 800 ವಿಕೆಟ್ಗಳನ್ನು ಪಡೆದಿದ್ದಾರೆ. ಹಾಗೆಯೇ 350 ಏಕದಿನ ಪಂದ್ಯಗಳಲ್ಲಿ 524 ವಿಕೆಟ್ ಪಡೆದಿದ್ದಾರೆ.

2015ರಿಂದ ಅವರು ಸನ್ರೈಸರ್ಸ್ ಹೈದರಾಬಾದ್ ತಂಡಕ್ಕೆ ಬೌಲಿಂಗ್ ಕೋಚ್ ಹಾಗೂ ಮೆಂಟರ್ ಆಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.