ಧರ್ಮಶಾಲಾ: ಹಿಮಾಚಲಪ್ರದೇಶ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಟೀಮ್ ಇಂಡಿಯಾ ವಿರುದ್ಧದ ಎರಡನೇ ಟಿ–20 ಪಂದ್ಯದಲ್ಲಿ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಶ್ರೀಲಂಕಾ ವೇಗಿ ಬಿನುರಾ ಫರ್ನಾಂಡೊ ಗಮನ ಸೆಳೆದಿದ್ದಾರೆ.

ಇದೀಗ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕ್ರೀಡಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ, ಪಾಥುಮ್ ನಿಸಾಂಕ ಮತ್ತು ನಾಯಕ ದಸುನ್ ಶನಕ ಅವರ ದಿಟ್ಟ ಆಟದ ಬಲದಿಂದ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 183 ರನ್ಗಳ ಸವಾಲಿನ ಮೊತ್ತ ಪೇರಿಸಿತ್ತು.

184 ರನ್ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಶ್ರೇಯಸ್ ಅಯ್ಯರ್ ಔಟಾಗದೆ (74),ರವೀಂದ್ರ ಜಡೇಜಔಟಾಗದೆ (45), ಸಂಜು ಸ್ಯಾಮ್ಸನ್ (39) ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಶ್ರೀಲಂಕಾ ವಿರುದ್ಧ ಏಳು ವಿಕೆಟ್ ಅಂತರದಿಂದ ಗೆಲುವು ಸಾಧಿಸಿತ್ತು.

ಈ ಮೂಲಕ ಭಾರತ ಮೂರು ಪಂದ್ಯಗಳ ಸರಣಿಯನ್ನು 2–0 ಅಂತರದಿಂದ ಕೈವಶ ಮಾಡಿಕೊಂಡಿತ್ತು.

ಲಾಹಿರು ಕುಮಾರ ಎಸೆದ 13ನೇ ಓವರ್ನಲ್ಲಿ ಸಂಜುಸ್ಯಾಮ್ಸನ್ ಬೌಂಡರಿ ಗಳಿಸಲು ಯತ್ನಿಸಿದರು. ಆದರೆ, ಬಿನುರಾ ಫರ್ನಾಂಡೊ ಅಮೋಘವಾಗಿ ಹಿಡಿದ ಕ್ಯಾಚ್ಗೆ ವಿಕೆಟ್ ಒಪ್ಪಿಸಿದ್ದರು.

ಓದಿ... 79ನೇ ವಸಂತಕ್ಕೆ ಕಾಲಿಟ್ಟ ಯಡಿಯೂರಪ್ಪ: ಬೊಮ್ಮಾಯಿ ಸೇರಿ ಗಣ್ಯರಿಂದ ಶುಭ ಹಾರೈಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.