ಅಹಮದಾಬಾದ್: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕ್ರಮ ನೀಡಿದ ಗಾಯಕ ಅರಿಜೀತ್ ಸಿಂಗ್ ಅವರು ದಿಗ್ಗಜ ಕ್ರಿಕೆಟಿಗ ಮಹೇಂದ್ರ ಸಿಂಗ್ ದೋನಿ ಅವರ ಕಾಲು ಮುಟ್ಟಿ ನಮಸ್ಕರಿಸಿದರು.

ಇಲ್ಲಿನ ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮವು ಹೃದಯಸ್ಪರ್ಶಿ ಕ್ಷಣಕ್ಕೆ ಸಾಕ್ಷಿಯಾಯಿತು. ಈ ವೇಳೆ ಕ್ಲಿಕಿಸಿರುವ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಬಹುಭಾಷಾ ನಟಿಯರಾದ ಕನ್ನಡತಿ ರಶ್ಮಿಕಾ ಮಂದಣ್ಣ ಹಾಗೂ ತಮನ್ನಾ ಭಾಟಿಯಾ ಸಹ ಸಮಾರಂಭದಲ್ಲಿ ಕಾರ್ಯಕ್ರಮ ನೀಡಿದರು.

ಇದನ್ನೂ ಓದಿ: IPL–2023 | ಉದ್ಘಾಟನಾ ಸಮಾರಂಭದಲ್ಲಿ ರಶ್ಮಿಕಾ ಮಂದಣ್ಣ ಡ್ಯಾನ್ಸ್

ಸತತ 16ನೇ ಐಪಿಎಲ್ ಆಡುತ್ತಿರುವ ಧೋನಿ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿದ್ದಾರೆ. ಅವರು ಉದ್ಘಾಟನಾ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ತಲಾ ಒಂದು ಬೌಂಡರಿ ಮತ್ತು ಸಿಕ್ಸರ್ ಸಹಿತ 7 ಎಸೆತಗಳಲ್ಲಿ 14 ರನ್ ಗಳಿಸಿ ಅಜೇಯವಾಗಿ ಉಳಿದರು.

ಗುಜರಾತ್ ಶುಭಾರಂಭ
ಚೆನ್ನೈ ವಿರುದ್ಧ ನಡೆದ ಟೂರ್ನಿಯ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ 5 ವಿಕೆಟ್ ಅಂತರದ ಜಯ ಸಾಧಿಸಿದೆ. ಪಂದ್ಯದಲ್ಲಿ, ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಚೆನ್ನೈ, ಆರಂಭಿಕ ಬ್ಯಾಟರ್ ಋತುರಾಜ್ ಗಾಯಕವಾಡ್ (92) ಅವರ ಬ್ಯಾಟಿಂಗ್ ಬಲದಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳನ್ನು ಕಳೆದುಕೊಂಡು 178 ರನ್ ಕಲೆಹಾಕಿತ್ತು.

ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಈ ಗುರಿಯನ್ನು ಇನ್ನೂ 4 ಎಸೆತಗಳು ಬಾಕಿ ಇರುವಂತೆಯೇ ತಲುಪಿದೆ. 36 ಎಸೆತಗಳಲ್ಲಿ 63 ರನ್ ಗಳಿಸಿದ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಅವರು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಇದನ್ನೂ ಓದಿ: ಐಪಿಎಲ್ಗೆ ಅದ್ದೂರಿ ಆರಂಭ: ಗಿಲ್ ಮಿಂಚು; ಟೈಟನ್ಸ್ ಶುಭಾರಂಭ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.