ಅಹಮದಾಬಾದ್: ಭಾರತದ ಎದುರು ನಡೆಯಲಿರುವ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಸ್ಟೀವನ್ ಸ್ಮಿತ್ ಅವರು ಮುನ್ನಡೆಸುವರು.

ಪೂರ್ಣಾವಧಿ ನಾಯಕ ಪ್ಯಾಟ್ ಕಮಿನ್ಸ್ ಅವರು ಈ ಸರಣಿಯಲ್ಲಿ ಆಡುತ್ತಿಲ್ಲ. ಆದ್ದರಿಂದ ಸ್ಮಿತ್ ನಾಯಕತ್ವ ವಹಿಸುವರು. ಸೋಮವಾರ ಮುಕ್ತಾಯವಾದ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಲ್ಲಿಯೂ ಸ್ಮಿತ್ ನಾಯಕರಾಗಿದ್ದರು. ಇದೇ ಶುಕ್ರವಾರ ಏಕದಿನ ಸರಣಿಯ ಮೊದಲ ಪಂದ್ಯ ಮುಂಬೈನಲ್ಲಿ ನಡೆಯಲಿದೆ.

‘ಪ್ಯಾಟ್ (ಕಮಿನ್ಸ್) ಈ ಸರಣಿಯಲ್ಲಿ ಆಡುತ್ತಿಲ್ಲ. ಅವರ ಕುಟುಂಬದಲ್ಲಿ ಈಗ ದುಃಖದ ವಾತಾವರಣವಿದೆ. ಈ ಸಂದರ್ಭದಲ್ಲಿ ಅವರು ಕುಟುಂಬದ ಸದಸ್ಯರೊಂದಿಗೆ ಇರಲಿದ್ದಾರೆ’ ಎಂದು ತಂಡದ ಕೋಚ್ ಆ್ಯಂಡ್ರ್ಯೂ ಮೆಕ್‌ಡೊನಾಲ್ಡ್ ಹೇಳಿದರು.

ಪ್ಯಾಟ್ ಕಮಿನ್ಸ್ ಅವರ ತಾಯಿ ಈಚೆಗೆ ನಿಧನರಾಗಿದ್ದರು.

‘ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ ಅವರು ಏಕದಿನ ಸರಣಿಯಲ್ಲಿ ಆಡಲು ಭಾರತಕ್ಕೆ ಮರಳುವರು. ತಮ್ಮ ಗಾಯದಿಂದ ಚೇತರಿಸಿಕೊಂಡಿದ್ದಾರೆ’ ಎಂದೂ ಮೆಕ್‌ಡೊನಾಲ್ಡ್ ತಿಳಿಸಿದ್ದಾರೆ.

ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಮಿಚೆಲ್ ಮಾರ್ಷ್ ಕೂಡ ತಂಡಕ್ಕೆ ಮರಳುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.