ಗ್ರಾಸ್ ಐಲೆಟ್, ಸೇಂಟ್ ಲೂಸಿಯಾ: ಆಸ್ಟ್ರೇಲಿಯಾದ ದಿಗ್ಗಜ ಬ್ಯಾಟರ್ ಡೇವಿಡ್ ವಾರ್ನರ್ ಅವರು ಮಂಗಳವಾರ ಟಿ20 ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಇದರೊಂದಿಗೆ ವಾರ್ನರ್ ಅವರ 15 ವರ್ಷಗಳ ಅಂತರರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನವು ಮುಕ್ತಾಯಗೊಂಡಿತು.

ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 8ರ ಹಂತದಲ್ಲಿ ಇಂದು ನಡೆದ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಆಫ್ಗಾನಿಸ್ತಾನ ಗೆಲುವು ಸಾಧಿಸಿದೆ. ಇದರೊಂದಿಗೆ ಸೆಮಿಫೈನಲ್ ಪ್ರವೇಶಿಸುವ ಆಸ್ಟ್ರೇಲಿಯಾದ ಕನಸು ಭಗ್ನಗೊಂಡಿತು. ಇದರ ಬೆನ್ನಲ್ಲೇ ಡೇವಿಡ್ ವಾರ್ನರ್ ಅಂತರರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಘೋಷಿಸುವ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ.

ಇದು ನಂಬಲು ಸಾಧ್ಯವಾಗುತ್ತಿಲ್ಲ. ಆಸೀಸ್ನ ಆರಂಭಿಕ ಆಟಗಾರರಾದ ಡೇವಿಡ್ ವಾರ್ನರ್ ಅವರನ್ನು ಮೈದಾನದ ಒಳಗೆ ಮತ್ತು ಹೊರಗೆ ನಾವು ಖಂಡಿತವಾಗಿಯೂ ಮಿಸ್ ಮಾಡಿಕೊಳ್ಳುತ್ತೇವೆ ಎಂದು ಜೋಶ್ ಹ್ಯಾಜಲ್ವುಡ್ ಹೇಳಿದ್ದಾರೆ.

ಇದುವರೆಗೆ 110 ಟಿ20 ಪಂದ್ಯಗಳನ್ನು ಆಡಿರುವ ವಾರ್ನರ್ 3,277 ರನ್ ಗಳಿಸಿದ್ದಾರೆ. ಈ ವರ್ಷದ ಜನವರಿಯಲ್ಲಿ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ಗೂ ವಾರ್ನರ್ ವಿದಾಯ ಹೇಳಿದ್ದರು.

2025ರ ಚಾಂಪಿಯನ್ಸ್ ಟ್ರೋಫಿಗೆ, ಆಸ್ಟ್ರೇಲಿಯಾ ತಂಡ ಬಯಸಿದಲ್ಲಿ ಆಡಲು ಲಭ್ಯರಿರುವುದಾಗಿಯೂ 37 ವರ್ಷದ ಆರಂಭಿಕ ಆಟಗಾರ ತಿಳಿಸಿದ್ದರು.
.T20 World Cup: ಸೆಮಿಫೈನಲ್ ಪ್ರವೇಶಿಸಿರುವ ತಂಡಗಳು ಯಾವುವು? ಪಂದ್ಯ ಯಾವಾಗ?.Ro'hit' Sharma: ಟಿ20 ವಿಶ್ವಕಪ್ನಲ್ಲಿ ರೋಹಿತ್ ಬರೆದ ದಾಖಲೆಗಳ ಪಟ್ಟಿ....

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.