ದುಬೈ: ಟ್ವೆಂಟಿ-20 ವಿಶ್ವಕಪ್ ಟೂರ್ನಿಯ ಆರಂಭಕ್ಕೂ ಮುನ್ನ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ಟೀಮ್ ಇಂಡಿಯಾ ಮಾರ್ಗದರ್ಶಕರನ್ನಾಗಿ ಬಿಸಿಸಿಐ ನೇಮಕಗೊಳಿಸಿತ್ತು.

ಟ್ವೆಂಟಿ-20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಉತ್ತಮ ಪ್ರದರ್ಶನ ನೀಡುವುದು ಧೋನಿ ಅವರನ್ನು ಮಾರ್ಗದರ್ಶಕ ಹುದ್ದೆಗೆ ನೇಮಕ ಮಾಡಿರುವುದರ ಹಿಂದಿನ ಏಕೈಕ ಉದ್ದೇಶವಾಗಿತ್ತು. ಹಾಗಾಗಿ ವಿಶ್ವಕಪ್ ಟೂರ್ನಿಗಾಗಿ ಮಾತ್ರ ನಿಯೋಜಿಸಲಾಗಿತ್ತು.

ಇದನ್ನೂ ಓದಿ:ಆಟಗಾರರು ದೇಶಕ್ಕಿಂತ ಐಪಿಎಲ್ಗೆ ಆದ್ಯತೆ ನೀಡುತ್ತಾರೆ; ಕಪಿಲ್ ದೇವ್ ಗರಂ

ಟ್ವೆಂಟಿ-20 ವಿಶ್ವಕಪ್ ಗೆಲ್ಲಲು ಮಹೇಂದ್ರ ಸಿಂಗ್ ಧೋನಿ ಸಾನಿಧ್ಯವು ನೆರವಾಗಲಿದೆ ಎಂದೇ ಅಂದಾಜಿಸಲಾಗಿತ್ತು. ಅಭಿಮಾನಿಗಳು, ಆಟಗಾರರು ಸೇರಿದಂತೆ ಕೋಚ್, ಮ್ಯಾನೇಜ್‌ಮೆಂಟ್ ಬಿಸಿಸಿಐನ ಈ ನಡೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದರು.

ಏಕದಿನ ಹಾಗೂ ಟ್ವೆಂಟಿ-20 ವಿಶ್ವಕಪ್ಗೆಲುವು ಮತ್ತು ಐಪಿಎಲ್‌ನಲ್ಲಿ ಸಿಎಸ್‌ಕೆ ಪರ ನಾಲ್ಕು ಟ್ರೋಫಿಗಳನ್ನು ಗೆದ್ದಿರುವ ಧೋನಿ, ಆಟಗಾರರ ಮನೋಬಲವನ್ನು ವೃದ್ಧಿಸಿಕೊಳ್ಳಲು ನೆರವಾಗಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು.

ಆದರೆ ಕನಿಷ್ಠ ಸೆಮಿಫೈನಲ್ ಪ್ರವೇಶಿಸಲು ಸಾಧ್ಯವಾಗದಿರುವುದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ.

ಪಾಕಿಸ್ತಾನ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಅತಿ ಒತ್ತಡದ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವಿಫಲವಾಗಿತ್ತು. ಪರಿಣಾಮ ವಿಶ್ವಕಪ್‌ನಲ್ಲಿ ಪಾಕ್ ವಿರುದ್ಧ ಇದೇ ಮೊದಲ ಬಾರಿಗೆ ಸೋಲಿನ ಮುಖಭಂಗ ಅನುಭವಿಸಿದೆ.

ನ್ಯೂಜಿಲೆಂಡ್ ವಿರುದ್ಧ ದ್ವಿತೀಯ ಪಂದ್ಯದಲ್ಲೂ ಬ್ಯಾಟರ್‌ಗಳ ವೈಫಲ್ಯದಿಂದಾಗಿ ಸೋಲಿಗೆ ಶರಣಾಯಿತು. ಬಳಿಕದ ಪಂದ್ಯಗಳಲ್ಲಿ ಪುಟಿದೇಳುವ ಪ್ರಯತ್ನ ಮಾಡಿದರೂ ಆಗಲೇ ಕಾಲ ಮಿಂಚಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.