ಶನಿವಾರ, 6 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Ro'hit' Sharma: ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಬರೆದ ದಾಖಲೆಗಳ ಪಟ್ಟಿ...

Published 25 ಜೂನ್ 2024, 6:20 IST
Last Updated 25 ಜೂನ್ 2024, 6:20 IST
ಅಕ್ಷರ ಗಾತ್ರ

ಗ್ರಾಸ್‌ ಐಲೆಟ್‌, ಸೇಂಟ್‌ ಲೂಸಿಯಾ: ರೋಹಿತ್ ಶರ್ಮಾ ಅವರ ‘ಸೂಪರ್ ಹಿಟ್’ ಬ್ಯಾಟಿಂಗ್ ಅಬ್ಬರದಲ್ಲಿ ಆಸ್ಟ್ರೇಲಿಯಾದ ಆರ್ಭಟ ಮರೆಯಾಗುವುದರ ಜೊತೆಗೆ ಭಾರತ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿತು.

ರೋಹಿತ್ ಶರ್ಮಾ ಕೇವಲ 41 ಎಸೆತಗಳನ್ನು ಎದುರಿಸಿ 8 ಭರ್ಜರಿ ಸಿಕ್ಸರ್ ಮತ್ತು 7 ಬೌಂಡರಿಗಳ ನೆರವಿನಿಂದ 92 ರನ್ ಕಲೆಹಾಕಿದರು. ಕೇವಲ 8 ರನ್ ಗಳ ಅಂತರದಲ್ಲಿ ಶತಕ ಮಿಸ್ ಮಾಡಿಕೊಂಡರು.

ಈ ಪಂದ್ಯದಲ್ಲಿ ರೋಹಿತ್‌ ಶರ್ಮಾ ಹಲವು ದಾಖಲೆಗಳನ್ನು ಬರೆದರು...

ಟಿ20ಯಲ್ಲಿ ಅತಿ ಹೆಚ್ಚು ರನ್; ಬಾಬರ್ ಅಜಂ ದಾಖಲೆ ಪತನ 

ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಇತ್ತೀಚೆಗೆ ನಿರ್ಮಿಸಿದ್ದ ದಾಖಲೆಯನ್ನು ರೋಹಿತ್ ಶರ್ಮಾ ಹಿಂದಿಕ್ಕಿದ್ದಾರೆ. ರೋಹಿತ್ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಬಾಬರ್‌ ಈವರೆಗೂ 4,145 ರನ್‌ ಕಲೆಹಾಕಿದ್ದು, ರೋಹಿತ್ ಶರ್ಮಾ 4,165 ರನ್ ಕಲೆಹಾಕಿದ್ದಾರೆ.

ವಿಶ್ವಕಪ್‌ನಲ್ಲಿ ಭಾರತೀಯ ನಾಯಕನ ಗರಿಷ್ಠ ಸ್ಕೋರ್

ರೋಹಿತ್ ಶರ್ಮಾ ವಿಶ್ವಕಪ್‌ನಲ್ಲಿ ಗರಿಷ್ಠ ರನ್ ಗಳಿಸಿದ ಭಾರತದ ಮೊದಲ ನಾಯಕ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ಹಿಂದೆ ವಿರಾಟ್ ಕೊಹ್ಲಿ 2021ರಲ್ಲಿ ದುಬೈನಲ್ಲಿ ಪಾಕಿಸ್ತಾನದ ವಿರುದ್ಧ 57 ರನ್‌ ಕಲೆಹಾಕಿ ಈ ಕೀರ್ತಿಗೆ ಭಾಜನರಾಗಿದ್ದರು. ಇದೀಗ ರೋಹಿತ್ ಈ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ವಿಶ್ವಕಪ್‌ನಲ್ಲಿ ಪಂದ್ಯವೊಂದರಲ್ಲಿ ನಾಯಕ ಕಲೆಹಾಕಿದ 2ನೇ ಗರಿಷ್ಠ ರನ್ ಎಂಬ ಕೀರ್ತಿಗೂ ಈ ಇನ್ನಿಂಗ್ಸ್ ಪಾತ್ರವಾಗಿದೆ. ಈ ಹಿಂದೆ 2010ರಲ್ಲಿ ವೆಸ್ಟ್ ಇಂಡೀಸ್ ಗೇಲ್ 98ರನ್ ಕಲೆಹಾಕಿದ್ದರು.

ಅತಿ ಹೆಚ್ಚು ಸಿಕ್ಸರ್‌ ಸಿಡಿಸಿದ ಭಾರತೀಯ

ರೋಹಿತ್ ಶರ್ಮಾ 8 ಸಿಕ್ಸರ್‌ಗಳನ್ನು ಸಿಡಿಸಿದ್ದು ಇದು ಟಿ20 ವಿಶ್ವಕಪ್ ಪಂದ್ಯವೊಂದರಲ್ಲಿ ಭಾರತೀಯ ಆಟಗಾರ ಸಿಡಿಸಿದ ಗರಿಷ್ಠ ಸಿಕ್ಸರ್ ಗಳಾಗಿವೆ. ಈ ಹಿಂದೆ 2007ರ ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಯುವರಾಜ್ ಸಿಂಗ್ ಏಳು ಸಿಕ್ಸರ್‌ಗಳನ್ನು ಸಿಡಿಸಿದ್ದರು. ಇದೀಗ ಈ ದಾಖಲೆಯನ್ನೂ ರೋಹಿತ್ ಪತನ ಮಾಡಿದ್ದಾರೆ.

ಭಾರತದ ಪರ ಮೂರನೇ ವೇಗದ ಅರ್ಧಶತಕ

ರೋಹಿತ್ ಶರ್ಮಾ ಇಂದಿನ ಪಂದ್ಯದಲ್ಲಿ ಕೇವಲ 19 ಎಸೆತಗಳಲ್ಲಿ ತಮ್ಮ ಅರ್ಧಶತಕ ಸಿಡಿಸಿದರು. ಆ ಮೂಲಕ T20 ವಿಶ್ವಕಪ್‌ನಲ್ಲಿ ಭಾರತದ ಪರ ಮೂರನೇ ವೇಗದ ಅರ್ಧಶತಕವನ್ನು ದಾಖಲಿಸಿದರು. 2007ರಲ್ಲಿ ಇಂಗ್ಲೆಂಡ್ ವಿರುದ್ಧ ಯುವರಾಜ್ ಸಿಂಗ್ 12 ಎಸೆತಗಳಲ್ಲಿ ಅರ್ಧಶತಕ ದಾಖಲಿಸಿದ್ದರು. 2021ರಲ್ಲಿ ಸ್ಕಾಟ್ಲೆಂಡ್ ವಿರುದ್ಧ KL ರಾಹುಲ್ 18 ಎಸೆತಗಳ ಅರ್ಧಶತಕ ಸಿಡಿಸಿದ್ದರು.

200 ಸಿಕ್ಸರ್ ಬಾರಿಸಿದ ಮೊದಲ ಆಟಗಾರ

ಟಿ20 ವಿಶ್ವಕಪ್‌ನಲ್ಲಿ 200 ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾದರು. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಮಾರ್ಟಿನ್ ಗಪ್ಟಿಲ್ 2ನೇ ಸ್ಥಾನದಲ್ಲಿದ್ದು ಅವರು 173 ಸಿಕ್ಸರ್ ಸಿಡಿಸಿದ್ದಾರೆ. 

ಅತಿ ಹೆಚ್ಚು ಸಿಕ್ಸರ್‌ಗಳನ್ನು ಹೊಡೆದ ಆಟಗಾರ

ರೋಹಿತ್ ಎರಡನೇ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದು, ಜೋಸ್ ಬಟ್ಲರ್ ಮತ್ತು ಡೇವಿಡ್ ವಾರ್ನರ್ ಅವರನ್ನು ಹಿಂದಿಕ್ಕಿದ್ದಾರೆ. ರೋಹಿತ್ ಶರ್ಮಾ ವಿಶ್ವಕಪ್‌ನ 42 ಇನ್ನಿಂಗ್ಸ್‌ಗಳಲ್ಲಿ 48 ಸಿಕ್ಸರ್‌ಗಳನ್ನು ಹೊಡೆದಿದ್ದಾರೆ. ವಿಂಡೀಸ್‌ನ ಗೇಲ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು ಅವರು 31 ಇನ್ನಿಂಗ್ಸ್‌ಗಳಲ್ಲಿ 63 ಸಿಕ್ಸರ್‌ ಸಿಡಿಸಿದ್ದಾರೆ. 

2ನೇ ವೈಯುಕ್ತಿಕ ಗರಿಷ್ಠ ಸ್ಕೋರ್

ರೋಹಿತ್ ಶರ್ಮಾ ಸಿಡಿಸಿದ 92 ರನ್ಗಳು ಭಾರತದ ಪರ ದಾಖಲಾದ 2ನೇ ವೈಯುಕ್ತಿಕ ಗರಿಷ್ಠ ಸ್ಕೋರ್ ಆಗಿದೆ. ಈ ಹಿಂದೆ 2010ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸುರೇಶ್ ರೈನ್ 101 ರನ್ ಗಳಿಸಿದ್ದರು. ಇದು ಭಾರತ ಪರ ಟಿ20 ವಿಶ್ವಕಪ್ ನಲ್ಲಿ ದಾಖಲಾದ ಮೊದಲ ವೈಯುಕ್ತಿಕ ಗರಿಷ್ಠ ಸ್ಕೋರ್ ಆಗಿದೆ.

ಎದುರಾಳಿ ವಿರುದ್ಧ ಅತಿ ಹೆಚ್ಚು ಸಿಕ್ಸರ್‌ಗಳು

ರೋಹಿತ್ ಶರ್ಮಾ ಎಲ್ಲಾ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ಬರೆದಿದ್ದಾರೆ. ಅವರು ಈಗ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್, ಏಕದಿನ, ಟಿ20 ಪಂದ್ಯಗಳಲ್ಲಿ ಒಟ್ಟು 132 ಸಿಕ್ಸರ್‌ಗಳನ್ನು ಹೊಡೆದಿದ್ದಾರೆ.

ಆರಂಭಿಕನಾಗಿ ಅತಿ ಹೆಚ್ಚು ಸಿಕ್ಸರ್‌

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ 529 ಸಿಕ್ಸರ್‌ಗಳ ದಾಖಿಸಿದ್ದಾರೆ. ಇವರು ಗೇಲ್‌ ಅವರ ಸಾಧನೆಯ ಸನಿಹದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT