ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಅಕ್ಟೋಬರ್ 24ರಂದು ಭಾರತವು ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ಸವಾಲನ್ನು ಎದುರಿಸಲಿದೆ. ಈ ರೋಚಕ ಪಂದ್ಯವು ಕ್ರಿಕೆಟ್ ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಭಾರತ-ಪಾಕಿಸ್ತಾನಗಳ ನಡುವಿನ ಪಂದ್ಯದ ಬಗ್ಗೆ ಮಾಜಿ ಕ್ರಿಕೆಟಿಗರು ತಮ್ಮದೇ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಪಾಕಿಸ್ತಾನ ತಂಡಕ್ಕೆ ಸಲಹೆಗಾರರಾಗಿರುವ ಆಸ್ಟ್ರೇಲಿಯಾದ ಮಾಜಿ ಆಟಗಾರ ಮ್ಯಾಥ್ಯೂ ಹೇಡನ್ ಈ ಪಂದ್ಯದ ಕುರಿತು ಮಾತನಾಡಿದ್ದಾರೆ.

ಭಾರತದ ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಮತ್ತು ವಿಕೆಟ್ ಕೀಪರ್ ರಿಷಭ್ ಪಂತ್ ಅವರು ಪಾಕಿಸ್ತಾನಕ್ಕೆ ಪ್ರಮುಖ ಸವಾಲಾಗಿ ಪರಿಣಮಿಸಲಿದ್ದಾರೆ ಎಂದು ಹೇಡನ್ ತಿಳಿಸಿದ್ದಾರೆ.

'ಕೆ.ಎಲ್.ರಾಹುಲ್ ಅವರು ಪಾಕಿಸ್ತಾನಕ್ಕೆ ಅಪಾಯಕಾರಿಯಾಗಿ ಪರಿಣಮಿಸಲಿದ್ದಾರೆ ಎಂದು ನಾನು ಭಾವಿಸುತ್ತೇನೆ. ಟಿ-20 ಕ್ರಿಕೆಟ್ನಲ್ಲಿ ಅವರ ಪ್ರಾಬಲ್ಯ ದೊಡ್ಡದಿದೆ. ನಗುಮೊಗದ ರಿಷಭ್ ಪಂತ್ ಸಹ ಸವಾಲನ್ನು ಒಡ್ಡಬಹುದು' ಎಂದು ಹೇಡನ್ ಹೇಳಿದ್ದಾರೆ.

ಭಾರತದಲ್ಲಿ ನಡೆಯಬೇಕಾಗಿದ್ದ ಟ್ವೆಂಟಿ-20 ವಿಶ್ವಕಪ್, ಕೋವಿಡ್ ಹಿನ್ನೆಲೆಯಲ್ಲಿ ಯುಎಇ ಹಾಗೂ ಒಮಾನ್ನಲ್ಲಿ ಆಯೋಜಿಸಲು ಬಿಸಿಸಿಐ ನಿರ್ಧರಿಸಿತ್ತು.

ಟಿ20 ವಿಶ್ವಕಪ್ನಲ್ಲಿ ಅಕ್ಟೋಬರ್ 24ರಂದು ನಡೆಯಲಿರುವ ಹೈ ವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನದ ಸವಾಲನ್ನು ಎದುರಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.