ಲೀಸೆಸ್ಟರ್ (ಇಂಗ್ಲೆಂಡ್): ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರಿಗೆ ಕೋವಿಡ್–19 ದೃಢಪಟ್ಟಿದೆ. ಇಂಗ್ಲೆಂಡ್ ವಿರುದ್ಧ ಮರುನಿಗದಿಯಾಗಿರುವ ಟೆಸ್ಟ್ ಪಂದ್ಯಕ್ಕೆ ಅಭ್ಯಾಸ ನಡೆಸುತ್ತಿರುವ ಟೀಂ ಇಂಡಿಯಾಗೆ ಇದರಿಂದ ಹಿನ್ನಡೆಯಾಗಿದೆ.

ಭಾರತ ಮತ್ತು ಇಂಗ್ಲೆಂಡ್ ತಂಡಗಳು ಕಳೆದ ವರ್ಷ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗಿದ್ದವು. ನಾಲ್ಕು ಪಂದ್ಯಗಳು ಮುಕ್ತಾಯವಾಗಿದ್ದು, ಭಾರತ 2–1ರಲ್ಲಿ ಮುನ್ನಡೆ ಸಾಧಿಸಿದೆ. ಐದನೇ ಪಂದ್ಯವನ್ನು ಕೋವಿಡ್ ಕಾರಣದಿಂದ ಮುಂದೂಡಲಾಗಿತ್ತು.

ಆ ಪಂದ್ಯಜುಲೈ 1 ರಂದು ಬರ್ಮಿಂಗ್ಹ್ಯಾಂನಲ್ಲಿ ಆರಂಭವಾಗಲಿದೆ. ಉಭಯ ತಂಡಗಳ ಆಟಗಾರರು,ಇಲ್ಲಿನಗ್ರೇಸ್ ರೋಡ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಕಣಕ್ಕಿಳಿದಿದ್ದಾರೆ.

ರೋಹಿತ್ಗೆ ಕೋವಿಡ್ ದೃಢಪಟ್ಟಿರುವುದನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾನುವಾರ ಬೆಳಗ್ಗೆ ಖಚಿತಪಡಿಸಿದೆ. ರೋಹಿತ್, ಸದ್ಯ ಹೋಟೆಲ್ನಲ್ಲಿಯೇ ಪ್ರತ್ಯೇಕವಾಸದಲ್ಲಿ ಉಳಿದಿದ್ದಾರೆ. ಮಂಡಳಿಯ ವೈದ್ಯಕೀಯ ತಂಡ ಅವರ ಆರೋಗ್ಯದ ಮೇಲೆ ನಿಗಾ ವಹಿಸುತ್ತಿದೆ ಎಂದು ಟ್ವೀಟ್ ಮೂಲಕ ತಿಳಿಸಿದೆ.

ಲೀಸೆಸ್ಟರ್ ಇಲವೆನ್ ವಿರುದ್ಧ ಗುರುವಾರ ಆರಂಭವಾದ ಅಭ್ಯಾಸ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 25 ರನ್ ಗಳಿಸಿದ್ದ ರೋಹಿತ್, ಎರಡನೇ ಇನಿಂಗ್ಸ್ ವೇಳೆ ಕಾಣಿಸಿಕೊಂಡಿರಲಿಲ್ಲ. ಕೋವಿಡ್ ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ಬಿಸಿಸಿಐ ಮಾಹಿತಿ ನೀಡಿತ್ತು.

ಪಂದ್ಯದ ವೇಳೆಗೆರೋಹಿತ್ ಚೇತರಿಸಿಕೊಳ್ಳದಿದ್ದರೆ, ವೇಗಿ ಜಸ್ಪ್ರೀತ್ ಬೂಮ್ರಾ ಅಥವಾ ವಿಕೆಟ್ಕೀಪರ್ರಿಷಭ್ ಪಂತ್ ತಂಡ ಮುನ್ನಡೆಸಲಿದ್ದಾರೆ. ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದರೆಅಥವಾ ಡ್ರಾ ಮಾಡಿಕೊಂಡರೆ 2007ರ ನಂತರ ಮೊದಲ ಬಾರಿಗೆ ಇಂಗ್ಲೆಂಡ್ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದ ಸಾಧನೆ ಮಾಡಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.