ಮುಂಬೈ: ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಪುನರಾಯ್ಕೆಯಾಗಿರುವ ರಾಹುಲ್ ದ್ರಾವಿಡ್ ಅವರ ಅವಧಿಯನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಬಳಿಕ ಅಂತಿಮಗೊಳಿಸಲಾಗುವುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.

ಏಕದಿನ ವಿಶ್ವಕಪ್ ಬಳಿಕ ದ್ರಾವಿಡ್ ಅವರ ಗುತ್ತಿಗೆ ಅವಧಿ ಮುಗಿದಿತ್ತು. ಬಳಿಕ ದ್ರಾವಿಡ್ ಅವರನ್ನೇ ಮುಖ್ಯ ಕೋಚ್ ಆಗಿ ಮುಂದುವರಿಸಲು ಬಿಸಿಸಿಐ ನಿರ್ಧರಿಸಿತ್ತು. ಇದಕ್ಕೆ ದ್ರಾವಿಡ್ ಅವರು ಸಹ ಒಪ್ಪಿಗೆ ಸೂಚಿಸಿದ್ದರು. ಆದರೆ ಅವರ ಅವಧಿ ಎಲ್ಲಿಯವರೆಗೆ ಇರಲಿದೆ ಎಂಬುದನ್ನು ಸ್ಪಷ್ಟಪಡಿಸಿರಲಿಲ್ಲ.
.ಭಾರತ– ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ ಇಂದು: ಯುವ ಆಟಗಾರರಿಗೆ ಸತ್ವಪರೀಕ್ಷೆ.ಭಾರತ ತಂಡದ ಮುಖ್ಯಕೋಚ್ ಆಗಿ ಮುಂದುವರಿದ ದ್ರಾವಿಡ್ .
ಈ ಕುರಿತು ಈಗ ಪ್ರತಿಕ್ರಿಯೆ ನೀಡಿರುವ ಜಯ್ ಶಾ, ಸಮಯದ ಅಭಾವದಿಂದಾಗಿ ಪ್ರಕ್ರಿಯೆ ವಿಳಂಬಗೊಂಡಿತು. ದ್ರಾವಿಡ್ ಹಾಗೂ ತಂಡದೊಂದಿಗೆ ಮಾತುಕತೆ ನಡೆಸಬೇಕಿದೆ. ಕೋಚ್ ಆಗಿ ಮುಂದುವರಿಯಲು ಒಪ್ಪಿದ್ದಾರೆ. ಒಮ್ಮೆ, ದಕ್ಷಿಣ ಆಫ್ರಿಕಾ ಸರಣಿ ಮುಗಿಸಿ ಬಂದ ಬಳಿಕ ಈ ಕುರಿತು ಚರ್ಚಿಸಲಿದ್ದೇವೆ ಎಂದು ಹೇಳಿದ್ದಾರೆ.

ಅಫ್ಗಾನಿಸ್ತಾನ ಸರಣಿಗೆ ಹಾರ್ದಿಕ್ ಮರಳುವ ಸಾಧ್ಯತೆ...

ಏಕದಿನ ವಿಶ್ವಕಪ್ ವೇಳೆ ಗಾಯಗೊಂಡಿದ್ದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಅಫ್ಗಾನಿಸ್ತಾನ ವಿರುದ್ಧದ ಸರಣಿ ವೇಳೆಗೆ ತಂಡಕ್ಕೆ ಮರಳುವ ನಿರೀಕ್ಷೆಯಿದೆ ಎಂದು ಜಯ್ ಶಾ ತಿಳಿಸಿದ್ದಾರೆ.

ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಪುನಶ್ಚೇತನದಲ್ಲಿರುವ ಹಾರ್ದಿಕ್ ಅವರ ಮೇಲೆ ನಿಗಾ ವಹಿಸಿದ್ದೇವೆ. ಆದಷ್ಟು ಬೇಗ ದೈಹಿಕ ಸಾಮರ್ಥ್ಯ ಮರಳಿ ಪಡೆಯಲು ಅವರು ಪರಿಶ್ರಮ ವಹಿಸುತ್ತಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ಅಫ್ಗಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಮರಳುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

2024ರಲ್ಲಿ ಹೊಸ ಎನ್‌ಸಿಎ ಸಿದ್ಧ...

ಬೆಂಗಳೂರು ಹೊರವಲಯದಲ್ಲಿ 40 ಎಕರೆ ಜಾಗದಲ್ಲಿ ನಿರ್ಮಾಣಗೊಂಡಿರುವ ಹೊಸ ಎನ್‌ಸಿಎ ಕೇಂದ್ರ 2024 ಆಗಸ್ಟ್ ವೇಳೆಗೆ ಕಾರ್ಯಾಚರಣೆ ಆರಂಭಗೊಳ್ಳಲಿದೆ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.