ಬೆನೊನಿ, ದಕ್ಷಿಣ ಆಫ್ರಿಕಾ: ಸತತ ಎರಡು ಪಂದ್ಯ ಗೆದ್ದು ಆತ್ಮವಿಶ್ವಾಸದಲ್ಲಿರುವ ಭಾರತ ತಂಡವು, 19 ವರ್ಷದೊಳಗಿನ ಮಹಿಳೆಯರ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಬುಧವಾರ ಸ್ಕಾಟ್ಲೆಂಡ್ಅನ್ನು ಎದುರಿಸಲಿದೆ.

ಡಿ ಗುಂಪಿನ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸಿದ್ದ ಶಫಾಲಿ ವರ್ಮಾ ನಾಯಕತ್ವದ ತಂಡವು ಎರಡನೇ ಹಣಾಹಣಿಯಲ್ಲಿ ಯುಎಇ ತಂಡಕ್ಕೆ ಸೋಲುಣಿಸಿತ್ತು. ಈ ಎರಡೂ ಪಂದ್ಯಗಳಲ್ಲಿ ಆರಂಭಿಕ ಬ್ಯಾಟರ್ಗಳಾದ ಶಫಾಲಿ ಮತ್ತು ಶ್ವೇತಾ ಶೆರಾವತ್ ಅಮೋಘ ಬ್ಯಾಟಿಂಗ್ ಮಾಡಿದ್ದರು.

ಸ್ಕಾಟ್ಲೆಂಡ್ ವಿರುದ್ಧವೂ ತಂಡ ಗೆಲುವಿನ ವಿಶ್ವಾಸದಲ್ಲಿದೆ. ಸೋಮವಾರ ನಡೆದ ಪಂದ್ಯದಲ್ಲಿ ಸ್ಕಾಟ್ಲೆಂಡ್, ದಕ್ಷಿಣ ಆಫ್ರಿಕಾ ಎದುರು ಸೋತಿದ್ದು, ಈ ಪಂದ್ಯದಲ್ಲಿ ಗೆಲುವಿನ ತವಕದಲ್ಲಿದೆ.

ಪಂದ್ಯ ಆರಂಭ: ಸಂಜೆ 5.15

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.