ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಆಲ್ರೌಂಡರ್ ವಿಜಯ ಶಂಕರ್ ಅವರುತಮ್ಮ ಗೆಳತಿ ವೈಶಾಲಿ ವಿಶ್ವೇಶ್ವರನ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ವಿಷಯವನ್ನು ಅವರು ಗುರುವಾರ ಇನ್ಸ್ಟಾಗ್ರಾಂ ಮೂಲಕ ಬಹಿರಂಗಪಡಿಸಿದ್ದಾರೆ.

ವೈಶಾಲಿ ವಿಶ್ವೇಶ್ವರನ್ ಅವರೊಂದಿಗಿರುವ ಎರಡು ಚಿತ್ರಗಳನ್ನುಶಂಕರ್ ಅವರು ಅಪ್ಲೋಡ್ ಮಾಡಿದ್ದಾರೆ. ಭಾರತ ತಂಡದ ಸಹ ಆಟಗಾರರಾದ ಕೆ.ಎಲ್. ರಾಹುಲ್, ಯಜುವೇಂದ್ರ ಚಾಹಲ್ ಮತ್ತು ಶ್ರೇಯಸ್ ಅಯ್ಯರ್ ಅವರು ವಿಜಯ ಶಂಕರ್ ಅವರಿಗೆ ಶುಭ ಕೋರಿದ್ದಾರೆ. ಅವರನ್ನು ಕರುಣ್ ನಾಯರ್, ಅಭಿನವ್ ಮುಕುಂದ್ ಮತ್ತು ಜಯಂತ್ ಯಾದವ್ ಕೂಡ ಅಭಿನಂ
ದಿಸಿದ್ದಾರೆ.

2018ರಲ್ಲಿ ಕೊಲಂಬೊದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಪಂದ್ಯದ ಮೂಲಕ ಶಂಕರ್ ಅವರು ಭಾರತ ಪರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ಗೆ ಪದಾರ್ಪಣೆ ಮಾಡಿದರು. ಅದಾದ ಒಂದು ವರ್ಷದ ನಂತರ ಆಸ್ಟ್ರೇಲಿಯಾ ವಿರುದ್ಧ ಮೆಲ್ಬರ್ನ್ನಲ್ಲಿ ಅವರು ಅಂತರರಾಷ್ಟ್ರೀಯ ಏಕದಿನ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದಾರೆ.

ಭಾರತದ ಪರ ಇದುವರೆಗೆ 12 ಏಕದಿನ ಮತ್ತು ಒಂಬತ್ತು ಟಿ20 ಪಂದ್ಯಗಳನ್ನು ಶಂಕರ್ ಆಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) ಮುಂಬರುವ ಆವೃತ್ತಿಯಲ್ಲಿ ವಿಜಯ ಶಂಕರ್ ಸನ್ ರೈಸರ್ಸ್ ಹೈದರಾಬಾದ್ ಪರ ಆಡಲಿದ್ದಾರೆ. ವಾರಾಂತ್ಯದಲ್ಲಿ ಸನ್ ರೈಸರ್ಸ್ ಹೈದರಾ ಬಾದ್ ತಂಡವು ತಂಡವು ಯುನೈಟೆಡ್ ಅರಬ್ ಎಮಿರೇಟ್ಸ್ಗೆ ಹಾರಲು ಸಜ್ಜಾಗಿದೆ.

ಭಾರತದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಈ ವರ್ಷ ಐಪಿಎಲ್ ಟೂರ್ನಿಯು ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಸೆಪ್ಟೆಂಬರ್ 19ರಿಂದ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.