ಲಖನೌ: ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದ್ದು, ಇಂದಿನಿಂದ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಬಾಲಿವುಡ್ ಸೇರಿ ಹಲವು ಕ್ಷೇತ್ರಗಳ ತಾರೆಯರು ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆದರೆ, ಸೋಮವಾರ ತಡರಾತ್ರಿ ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರನ್ನು ಹೋಲುವ ವ್ಯಕ್ತಿಯೊಬ್ಬರು ನೀಲಿ ಜರ್ಸಿಯಲ್ಲಿ ಕಾಣಿಸಿಕೊಂಡಿದ್ದಾರೆ. ಇವರು ನಿಜವಾಗಿಯೂ ವಿರಾಟ್ ಕೊಹ್ಲಿಯೇ ಇರಬಹುದು ಎಂದು ಭಾವಿಸಿದ್ದ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಳ್ಳುವುದಕ್ಕೆ ಮುಗಿಬಿದ್ದಿದ್ದಾರೆ.

ಇದೀಗ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಮತ್ತೊಂದೆಡೆ ವಿರಾಟ್ ಕೊಹ್ಲಿ, ಶ್ರೀರಾಮನ ದರ್ಶನ ಪಡೆಯುತ್ತಿರುವಂತೆ ತೋರುವ ಪೋಸ್ಟರ್‌ಗಳನ್ನು ಅಭಿಮಾನಿಗಳು ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ವಿರಾಟ್ ಕೊಹ್ಲಿ – ಅನುಷ್ಕಾ ಶರ್ಮಾ ದಂಪತಿಗೆ ಆಹ್ವಾನ ನೀಡಲಾಗಿತ್ತು. ಆದರೆ, ಅವರು ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ.

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್, ಅನಿಲ್ ಕುಂಬ್ಳೆ, ವೆಂಕಟೇಶ್ ಪ್ರಸಾದ್ ಅವರು ಸಮಾರಂಭದಲ್ಲಿ ಹಾಜರಿದ್ದರು.

ಸಿನಿ ತಾರೆಯರ ದಂಡು

ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್, ಸೂಪರ್ ಸ್ಟಾರ್ ರಜನಿಕಾಂತ್, ತೆಲುಗು ಮೆಗಾಸ್ಟಾರ್ ನಟ ಚಿರಂಜೀವಿ, ಪವನ್ ಕಲ್ಯಾಣ್, ರಾಮ್ ಚರಣ್, ಧನುಷ್, ಸಂಗೀತ ನಿರ್ದೇಶಕ ಅನು ಮಲಿಕ್, ಗಾಯಕ ಶಂಕರ್ ಮಹಾದೇವನ್ ಅವರೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಬಾಲಿವುಡ್ ನಿರ್ದೇಶಕರಾದ ರೋಹಿತ್ ಶೆಟ್ಟಿ ಮತ್ತು ರಾಜಕುಮಾರ್ ಹಿರಾನಿ, ನಟಿ ಮಾಧುರಿ ದೀಕ್ಷಿತ್, ಕಂಗನಾ ರನೌತ್, ರಣಬೀರ್ ಕಪೂರ್ -ಆಲಿಯಾ ಭಟ್, ವಿಕ್ಕಿ ಕೌಶಲ್ -ಕತ್ರಿನಾ ಕೈಫ್ ಮತ್ತು ಆಯುಷ್ಮಾನ್ ಖುರಾನಾ ಅವರು ಅಯೋಧ್ಯೆಯ ರಾಮಮಂದಿರದ ಎದುರು ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.
.ಅಯೋಧ್ಯೆಯ ರಾಮ ಮಂದಿರಕ್ಕೆ ಇಂದು ಮುಂಜಾನೆಯಿಂದಲೇ ಭಕ್ತರ ದಂಡು:2 ಅವಧಿಯಲ್ಲಿ ದರ್ಶನ.ರಾಮಮಂದಿರ| ಶತಮಾನಗಳ ಕಾಯುವಿಕೆ ಅಂತ್ಯಗೊಂಡಿದೆ: ಪಾಕ್ ಮಾಜಿ ಕ್ರಿಕೆಟಿಗ ದಾನಿಶ್ .ಕರ್ನಾಟಕಕ್ಕೆ ಸಿಕ್ಕ ನಿಜವಾದ ಸಮ್ಮಾನ: ಶ್ರೀರಾಮ, ಮೋದಿಯನ್ನು ಕೊಂಡಾಡಿದ ನಟ ಸುದೀಪ್.ಬಾಲರಾಮನ ಪ್ರಾಣ ಪ್ರತಿಷ್ಠಾಪನೆ: ಕಾರ್ಯಕ್ರಮಕ್ಕೆ ಆಗಮಿಸಿದ ದೇವೇಗೌಡರಿಗೆ ಮೋದಿ ನಮನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.