ಮುಂಬೈ: ತಮ್ಮ ನಿಯಂತ್ರಣದಲ್ಲಿರುವ ಎಲ್ಲವನ್ನೂ ವಿರಾಟ್ ಕೊಹ್ಲಿ ಮಾಡುತ್ತಿದ್ದಾರೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಖ್ಯ ತರಬೇತುದಾರ ಸಂಜಯ್ ಬಂಗಾರ್ ಹೇಳಿದ್ದಾರೆ.

ಕಳಪೆ ಬ್ಯಾಟಿಂಗ್ ಲಯದಿಂದ ಬಳಲುತ್ತಿರುವ ವಿರಾಟ್ ಕೊಹ್ಲಿ, ತೀವ್ರ ಒತ್ತಡಕ್ಕೆ ಒಳಗಾಗಿದ್ದಾರೆ. ಸತತ ಎರಡನೇ ಬಾರಿ ಗೋಲ್ಡನ್ ಡಕ್ ಔಟ್ ಆಗಿದ್ದಾರೆ. ಈ ನಡುವೆ ಆರ್ಸಿಬಿಯ ಮಾಜಿ ನಾಯಕನಿಗೆ ಬಂಗಾರ್ ಬೆಂಬಲ ಸೂಚಿಸಿದ್ದಾರೆ.

ಇದನ್ನೂ ಓದಿ:IPL 2022: ಪ್ಲೇ ಆಫ್, ಫೈನಲ್ಗೆ ಪೂರ್ಣಪ್ರಮಾಣದಲ್ಲಿ ಪ್ರೇಕ್ಷಕರು

'ಅವರು (ಕೊಹ್ಲಿ) ಆರ್ಸಿಬಿಗಾಗಿ ಉತ್ತಮ ಪ್ರದರ್ಶನ ನೀಡುತ್ತಲೇ ಬಂದಿದ್ದಾರೆ. ಆಟಗಾರರು ಇಂತಹ ಕಠಿಣ ಪರಿಸ್ಥಿತಿಯಲ್ಲಿ ಹಾದು ಹೋಗುತ್ತಾರೆ. ಈ ಆವೃತ್ತಿಯ ಆರಂಭದಲ್ಲೂ ಉತ್ತಮ ಪ್ರದರ್ಶನ ನೀಡಿದ್ದರು. ನಾವೆಲ್ಲರೂ ಇಂತಹ ಪರಿಸ್ಥಿತಿಯನ್ನು ಎದುರಿಸಿದ್ದೇವೆ. ಈ ಕಠಿಣ ಪರಿಸ್ಥಿತಿಯಿಂದಲೂ ಅವರು ಮತ್ತಷ್ಟು ಪ್ರಬಲರಾಗಿ ಹಿಂತಿರುಗುತ್ತಾರೆ ಎಂಬ ನಂಬಿಕೆ ನನಗಿದೆ' ಎಂದು ಹೇಳಿದ್ದಾರೆ.

ಟೀಮ್ ಇಂಡಿಯಾದ ಮಾಜಿ ಕೋಚ್ ರವಿ ಶಾಸ್ತ್ರಿ ಸೇರಿದಂತೆ ಮಾಜಿಗಳು, ಕೊಹ್ಲಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.

ಈ ಕುರಿತು ಪ್ರತಿಕ್ರಿಸಿಯಿದ ಬಂಗಾರ್, 'ಖಂಡಿತವಾಗಿಯೂ ಕೊಹ್ಲಿ ತಮ್ಮ ನಿಯಂತ್ರಣದಲ್ಲಿರುವ ಎಲ್ಲವನ್ನೂ ಮಾಡುತ್ತಿದ್ದಾರೆ. ತಮ್ಮ ಫಿಟ್ನೆಸ್, ಕೌಶಲ್ಯ ಹಾಗೂ ವಿರಾಮ ತೆಗೆದುಕೊಳ್ಳುತ್ತಾರೆ. ಅಲ್ಲದೆ ತಮ್ಮ ಮೇಲೆ ಒತ್ತಡ ಸೃಷ್ಟಿಯಾಗದಂತೆ ನೋಡಿಕೊಳ್ಳುತ್ತಾರೆ. ಅವರು ನಿಯಮಿತವಾಗಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಾರೆ. ಮುಂದೆಯೂ ಅದು ಮುಂದುವರಿಯಲಿದೆ' ಎಂದು ಹೇಳಿದ್ದಾರೆ.

ಐಪಿಎಲ್ 2022ರಲ್ಲಿ ಕೊಹ್ಲಿ ಬ್ಯಾಟಿಂಗ್ ಕಾರ್ಡ್ ಇಂತಿದೆ: 41*, 12, 5, 48, 1, 12, 0, 0

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.