ನವದೆಹಲಿ: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ್ದಾರೆ.

ಕೊಹ್ಲಿ ಅವರು ಫಾರ್ಮ್ ಸಮಸ್ಯೆ ಬಗ್ಗೆ ಹಲವರು ಟೀಕೆಗಳನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಟ್ವೀಟ್ ಮಾಡಿದ್ದ ಬಾಬರ್ ಅಜಮ್, 'ಇದೂ ಸಾಗಿಹೋಗಲಿದೆ, ಗಟ್ಟಿಯಾಗಿರಿ' ಎಂದು ಬರೆದಿದ್ದರು.

ಇದಕ್ಕೆ ಶನಿವಾರ ಪ್ರತಿಕ್ರಿಯಿಸಿರುವ ಕೊಹ್ಲಿ, ‘ಧನ್ಯವಾದಗಳು. ಹೀಗೇ ಮಿಂಚುತ್ತಿರಿ ಮತ್ತು ಮೇಲೇರುತ್ತಿರಿ. ನಿಮಗೆ ಶುಭವಾಗಲಿ’ ಎಂದು ಕೊಹ್ಲಿ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕ್ರಿಕೆಟ್ ಅಭಿಮಾನಿಯೊಬ್ಬರು, ‘ಇದನ್ನೇ ಕ್ರೀಡಾ ಸ್ಪೂರ್ತಿ ಎಂದು ಕರೆಯಲಾಗುತ್ತದೆ’ ಎಂದು ಟ್ವೀಟ್ ಮಾಡಿದ್ದಾರೆ.

ಬಾಬರ್ ಅಜಮ್ ಅವರ ಟ್ವೀಟ್‌ಗೆ ಕೊಹ್ಲಿ ಪ್ರತಿಕ್ರಿಯಿಸಲಾರರು ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟರ್ ಶಾಹೀದ್ ಅಫ್ರಿದಿ ಕೊಂಕು ನುಡಿದಿದ್ದರು. ಆದರೆ, ಪ್ರತಿಕ್ರಿಯೆ ನೀಡುವ ಮೂಲಕ ಕೊಹ್ಲಿ, ಅಫ್ರಿದಿ ಊಹೆಯನ್ನು ಸುಳ್ಳಾಗಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.