ನವದೆಹಲಿ: ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಲ್‌ರೌಂಡರ್ ಆಟಗಾರ ವಾಷಿಂಗ್ಟನ್ ಸುಂದರ್, ಪ್ರಸಕ್ತ ಸಾಗುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಿಂದಲೇ ನಿರ್ಗಮಿಸಿದ್ದಾರೆ.

ಇದರಿಂದಾಗಿ ಎಸ್‌ಆರ್‌ಎಚ್ ತಂಡಕ್ಕೆ ಹಿನ್ನಡೆಯಾಗಿದೆ.

ಸ್ನಾಯು ಸೆಳೆತದಿಂದ ಬಳಲುತ್ತಿರುವ ಸುಂದರ್, ಟೂರ್ನಿಯಲ್ಲಿ ತಂಡದ ಉಳಿದಿರುವ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ ಎಂದು ಫ್ರಾಂಚೈಸ್ ತಿಳಿಸಿದೆ.

23 ವರ್ಷದ ಸುಂದರ್ ಅವರಿಗೆ ಗಮನಾರ್ಹ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ. ಏಳು ಪಂದ್ಯಗಳಲ್ಲಿ ಮೂರು ವಿಕೆಟ್‌ಗಳನ್ನಷ್ಟೇ ಪಡೆದಿದ್ದರು. ಹಾಗೆಯೇ 15ರ ಸರಾಸರಿಯಲ್ಲಿ 60 ರನ್ ಗಳಿಸಿದ್ದರು.

ಕಳೆದ ವರ್ಷವೂ ವಾಷಿಂಗ್ಟನ್ ಸುಂದರ್ ಗಾಯದ ಸಮಸ್ಯೆಕ್ಕೊಳಗಾಗಿದ್ದರು.

ಐಪಿಎಲ್ 2023 ಟೂರ್ನಿಯಲ್ಲಿ ಸನ್‌ರೈಸರ್ಸ್, ಈವರೆಗೆ ಆಡಿರುವ ಏಳು ಪಂದ್ಯಗಳಲ್ಲಿ ಎರಡು ಪಂದ್ಯಗಳಲ್ಲಿ ಮಾತ್ರ ಗೆಲುವು ದಾಖಲಿಸಿದ್ದು, ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.