ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಭಾನುವಾರ ಗುಜರಾತ್ ಟೈಟನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್ ಚಾಲಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಆರಂಭಿಕ ಬ್ಯಾಟರ್ ವಿರಾಟ್ ಕೊಹ್ಲಿ ದಾಖಲೆಯ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ.

ಇತ್ತ ಕೊಹ್ಲಿ ಶತಕ ಸಿಡಿಸುತ್ತಿದ್ದಂತೆ ಗ್ಯಾಲರಿಯಲ್ಲಿ ಕುಳಿತಿದ್ದ ಪತ್ನಿ ಅನುಷ್ಕಾ ಶರ್ಮಾ ಅವರು ಪ್ಲೈಯಿಂಗ್ ಕಿಸ್ ನೀಡುವ ಮೂಲಕ ಖುಷಿ ಹಂಚಿಕೊಂಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ, ವಿರಾಟ್ ಕೊಹ್ಲಿ ಅವರ ಶತಕದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 197 ರನ್ ಗಳಿಸಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ 19.1 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು.

ಈ ಪಂದ್ಯದಲ್ಲಿ ಕೊಹ್ಲಿ 61 ಎಸೆತಗಳಲ್ಲಿ 13 ಬೌಂಡರಿ, 1 ಸಿಕ್ಸರ್ ಸಮೇತ 101 ರನ್ ಗಳಿಸಿದರೆ, ಎದುರಾಳಿ ತಂಡದ ಯುವತಾರೆ ಶುಭಮನ್ ಗಿಲ್ 52 ಎಸೆತಗಳಲ್ಲಿ 5 ಬೌಂಡರಿ, 8 ಸಿಕ್ಸರ್ ಸಹಿತ 104 ರನ್ ಗಳಿಸಿ ಗುಜರಾತ್ ತಂಡಕ್ಕೆ ಗೆಲುವು ತಂದುಕೊಟ್ಟರು.
.ಏನೇ ಆದ್ರು ‘ಮೈ ಫೇವರಿಟ್’ ಆರ್‌ಸಿಬಿ, ಕಪ್ ಗೆಲ್ಲುವ ಸಮಯ ಬಂದೇ ಬರುತ್ತೆ: ಡಿಕೆಶಿ.
ಈ ಸೋಲಿನೊಂದಿಗೆ ಆರ್‌ಸಿಬಿ ತಂಡವು ಪ್ಲೇ ಆಫ್ ತಲುಪುವ ಅವಕಾಶ ಕಳೆದುಕೊಂಡಿತು. ಕಳೆದ ಮೂರು ಆವೃತ್ತಿಗಳಲ್ಲಿಯೂ ಬೆಂಗಳೂರು ಬಳಗವು ನಾಲ್ಕರ ಹಂತ ಪ್ರವೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.