ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಲಂಕಾ ಪ್ರವಾಸ: ಕೊಹ್ಲಿ, ರೋಹಿತ್‌ಗೆ ವಿಶ್ರಾಂತಿ ಸಂಭವ

Published : 8 ಜುಲೈ 2024, 19:54 IST
Last Updated : 8 ಜುಲೈ 2024, 19:54 IST
ಫಾಲೋ ಮಾಡಿ
Comments

ನವದೆಹಲಿ: ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಮತ್ತು ಪ್ರಮುಖ ಬ್ಯಾಟರ್‌ ವಿರಾಟ್‌ ಕೊಹ್ಲಿ ಅವರಿಗೆ ಈ ತಿಂಗಳ ಅಂತ್ಯದಲ್ಲಿ ಶ್ರೀಲಂಕಾ ವಿರುದ್ಧ ನಡೆಯುವ ಮೂರು ಪಂದ್ಯಗಳ ಏಕದಿನ ಸರಣಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಶ್ರಿಲಂಕಾ ಪ್ರವಾಸಕ್ಕೆ ಹಾರ್ದಿಕ್ ಪಾಂಡ್ಯ ಅಥವಾ ಕೆ.ಎಲ್.ರಾಹುಲ್ ಅವರಿಗೆ ನಾಯಕತ್ವ ವಹಿಸುವ ನಿರೀಕ್ಷೆಯಿದೆ.

ತಂಡದ ಪ್ರಮುಖ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಅವರಿಗೂ ವಿರಾಂ ನೀಡುವ ಸಾಧ್ಯತೆ ನಿಚ್ಚಳವಾಗಿದೆ.

ಐಪಿಎಲ್‌ನಿಂದ ಹಿಡಿದು ಟಿ20 ವಿಶ್ವಕಪ್‌ವರೆಗೆ ಬಿಡುವಿಲ್ಲದೇ ಆಡಿರುವ ಕಾರಣ ಭಾರತ ತಂಡದ ಪ್ರಮುಖ ಆಟಗಾರರು ದೀರ್ಘ ವಿರಾಮ ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ.

37 ವರ್ಷದ ರೋಹಿತ್‌ ಸುಮಾರು ಆರು ತಿಂಗಳಿಂದ ವಿಶ್ರಾಂತಿಯಿಲ್ಲದೇ ಆಡಿದ್ದಾರೆ.

ಮುಂದಿನ ವರ್ಷದ ಐಸಿಸಿ ಚಾಂಪಿಯನ್ಸ್‌ ಟ್ರೋಫಿಗೆ ಮುನ್ನ, ಸೆಪ್ಟೆಂಬರ್‌ನಿಂದ ಜನವರಿವರೆಗಿನ ಅವಧಿಯಲ್ಲಿ ಭಾರತ 10 ಟೆಸ್ಟ್‌ ಪಂದ್ಯಗಳನ್ನು ಆಡಲಿದ್ದು, ಅದರಲ್ಲಿ ರೋಹಿತ್ ಮತ್ತು ಕೊಹ್ಲಿ ಆಡುವತ್ತ ಗಮನಹರಿಸಲಿದ್ದಾರೆ ಎಂದು ಬಿಸಿಸಿಐನ ಮೂಲವೊಂದು ಪಿಟಿಐಗೆ ತಿಳಿಸಿದೆ.

ಭಾರತ, ಬಾಂಗ್ಲಾದೇಶ ವಿರುದ್ಧ ಎರಡು ಟೆಸ್ಟ್‌, ನ್ಯೂಜಿಲೆಂಡ್‌ ವಿರುದ್ಧ ಮೂರು ಮತ್ತು ಆಸ್ಟ್ರೇಲಿಯಾದಲ್ಲಿ ಬಾರ್ಡರ್‌–ಗಾವಸ್ಕರ್‌ ಟ್ರೋಫಿಗಾಗಿ ಐದು ಟೆಸ್ಟ್‌ಗಳ ಸರಣಿ ಆಡಲಿದೆ.

ರೋಹಿತ್‌ ಗೈರಿನಲ್ಲಿ ಪಾಂಡ್ಯಾ ಅವರೇ ನಾಯಕತ್ವ ವಹಿಸುವ ಸಾಧ್ಯತೆಯಿದೆ. ಆದರೆ ದಕ್ಷಿಣ ಆಫ್ರಿಕ ವಿರುದ್ಧ ಏಕದಿನ ಸರಣಿಯಲ್ಲಿ ನಾಯಕರಾಗಿದ್ದ ಕೆ.ಎಲ್‌.ರಾಹುಲ್‌ ಅವರನ್ನೂ ಕಡೆಗಣಿಸುವಂತಿಲ್ಲ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT