ನವದೆಹಲಿ: ಭಾರತ ಮಹಿಳಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಮೇಶ್ ಪೊವಾರ್ ಅವರನ್ನು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ‘ವರ್ಗಾವಣೆ’ ಮಾಡಿದೆ.

ಇನ್ನೆರಡು ತಿಂಗಳುಗಳ ನಂತರ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಡಲಿರುವ ಮಹಿಳಾ ತಂಡಕ್ಕೆ ಮುಖ್ಯ ಕೋಚ್ ಸ್ಥಾನಕ್ಕೆ ಯಾರನ್ನೂ ಹೆಸರಿಸಿಲ್ಲ. ಆದರೆ, ಮಾಜಿ ಕ್ರಿಕೆಟಿಗ ಹೃಷಿಕೇಶ್ ಕಾನಿಟ್ಕರ್ ಅವರನ್ನು ಬ್ಯಾಟಿಂಗ್ ಕೋಚ್ ಆಗಿ ನೇಮಕ ಮಾಡಲಾಗಿದೆ.

‘ರಮೇಶ್ ಪೊವಾರ್ ಅವರು ಎನ್ಸಿಎನಲ್ಲಿ ಸ್ಪಿನ್ ಬೌಲಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸುವರು. ಅಕಾಡೆಮಿಯ ಸಿಬ್ಬಂದಿ ಮರುರಚನೆ ಯೋಜನೆ ಅಂಗವಾಗಿ ಈ ನೇಮಕ ಮಾಡಲಾಗಿದೆ. ಪೊವಾರ್ ಅವರು ಎನ್ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಅವರ ಬಳಗವನ್ನು ಸೇರಲಿದ್ದಾರೆ’ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದೇ 9ರಿಂದ ಮುಂಬೈನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ಎದುರಿನ ಟಿ20 ಸರಣಿಯಲ್ಲಿ ಆಡುವ ಭಾರತ ಮಹಿಳಾ ತಂಡದೊಂದಿಗೆ ಕಾನಿಟ್ಕರ್ ಕಾರ್ಯಾರಂಭ ಮಾಡಲಿದ್ದಾರೆ ಎಂದೂ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.