ಮೆಲ್ಬರ್ನ್: ಮಹಿಳಾ ದಿನಾಚರಣೆಯಂದು ನಡೆಯುತ್ತಿರುವ ವಿಶ್ವ ಮಹಿಳಾ ಟಿ20 ಕ್ರಿಕೆಟ್ನ ಫೈನಲ್ನಲ್ಲಿ ಆಸ್ಟ್ರೇಲಿಯಾ ತಂಡ ಟಾಸ್ ಗೆದ್ದಿದ್ದು, ಬ್ಯಾಟಿಂಗ್ ಆಯ್ದು ಕೊಂಡಿದೆ.

ಭಾರತದ ಮಹಿಳಾ ಕ್ರಿಕೆಟ್ ತಂಡವು ಇದೇ ಮೊದಲ ಬಾರಿಗೆ ವನಿತೆಯರ ಟ್ವೆಂಟಿ–20 ವಿಶ್ವಕಪ್ ಟೂರ್ನಿಯ ಫೈನಲ್ನಲ್ಲಿ ಆಡಲು ಕಣಕ್ಕಿಳಿಯಲಿದೆ. ನಾಲ್ಕು ಬಾರಿಯ ಚಾಂಪಿಯನ್, ಆತಿಥೇಯ ಆಸ್ಟ್ರೇಲಿಯಾ ತಂಡದ ಎದುರು ಪ್ರಶಸ್ತಿಗಾಗಿ ಹಣಾಹಣಿ ನಡೆಸಲಿದೆ.

ಹೋದ ಸಲದ ಟೂರ್ನಿಯಲ್ಲಿ ಸೆಮಿಫೈನಲ್ನಲ್ಲಿ ಸೋತಿದ್ದ ಭಾರತವು ಈ ಬಾರಿ ಎ ಗುಂಪಿನಲ್ಲಿ ಎಲ್ಲ ನಾಲ್ಕು ಪಂದ್ಯಗಳನ್ನು ಗೆದ್ದು ನಾಲ್ಕರ ಘಟ್ಟ ಪ್ರವೇಶಿಸಿತ್ತು. ಇಂಗ್ಲೆಂಡ್ ಜೊತೆ ಆಡಲು ಸಿದ್ಧವಾಗಿತ್ತು. ಆದರೆ ಮಳೆ ಸುರಿದ ಕಾರಣ ಪಂದ್ಯ ರದ್ದಾಯಿತು. ಹರ್ಮನ್ಪ್ರೀತ್ ಕೌರ್ ಬಳಗವು ಗುಂಪು ಹಂತದ ಪಾಯಿಂಟ್ಸ್ ಆಧಾರದಲ್ಲಿ ಫೈನಲ್ ಪ್ರವೇಶಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.