ಲಂಡನ್: ಇಂಗ್ಲೆಂಡ್‌ನ ಚೊಚ್ಚಲ ಏಕದಿನ ವಿಶ್ವಕಪ್ ವಿಜೇತ ತಂಡದ ಮಾಜಿ ನಾಯಕ ಇಯಾನ್ ಮಾರ್ಗನ್, ಎಲ್ಲ ಮಾದರಿಯ ಕ್ರಿಕೆಟ್‌ಗೆ ವಿದಾಯ ಹಾಡಿದ್ದಾರೆ.

ಕ್ರಿಕೆಟ್‌ಗೆ ಹೆಮ್ಮೆಯಿಂದಲೇ ನಿವೃತ್ತಿ ಘೋಷಿಸುವುದಾಗಿ ತಿಳಿಸಿದ್ದಾರೆ.

ಇಯಾನ್ ಮಾರ್ಗನ್ ನಾಯಕತ್ವದಲ್ಲಿ ಇಂಗ್ಲೆಂಡ್, 2019ರ ಏಕದಿನ ವಿಶ್ವಕಪ್ ಜಯಿಸಿತ್ತು.

ಇದನ್ನೂ ಓದಿ: IND vs AUS: 3ನೇ ಟೆಸ್ಟ್ ಧರ್ಮಶಾಲಾದಿಂದ ಇಂದೋರ್ಗೆ ಸ್ಥಳಾಂತರ

126 ಏಕದಿನ ಮತ್ತು 72 ಟಿ20 ಪಂದ್ಯಗಳಲ್ಲಿ ಮಾರ್ಗನ್, ಇಂಗ್ಲೆಂಡ್ ತಂಡದ ನಾಯಕತ್ವ ವಹಿಸಿದ್ದರು. ಕಪ್ತಾನರಾಗಿ ಎರಡು ಮಾದರಿಗಳಲ್ಲಾಗಿ 118 ಗೆಲುವು ಸಾಧಿಸಿರುವುದು ಕೂಡಾ ದಾಖಲೆಯಾಗಿದೆ.

ಕ್ರಿಕೆಟ್ ಬಿಟ್ಟು ಹೋಗಲು ಇದುವೇ ಸೂಕ್ತ ಸಮಯ. ಪ್ರತಿಯೊಂದು ಕ್ಷಣವನ್ನು ಆನಂದಿಸಿದ್ದೇನೆ. ಎಲ್ಲ ಕ್ರೀಡಾಪಟುವಿನಂತೆ ವೃತ್ತಿ ಜೀವನದಲ್ಲಿ ಅನೇಕ ಏಳು-ಬೀಳುಗಳನ್ನು ಕಂಡಿದ್ದೇನೆ. ಕುಟುಂಬ, ಸ್ನೇಹಿತರ ಸಹಕಾರ ಸದಾ ಇತ್ತು. ಈ ಸಂದರ್ಭದಲ್ಲಿ ನನ್ನ ಪತ್ನಿ, ಕುಟುಂಬ, ಸ್ನೇಹಿತರು, ಕೋಚ್, ಸಹ ಆಟಗಾರರು, ಅಭಿಮಾನಿಗಳಿಗೆ ಧನ್ಯವಾದಗಳನ್ನು ಹೇಳಲು ಇಚ್ಛಿಸುತ್ತೇನೆ ಎಂದು ವಿದಾಯ ಸಂದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.