ಕೊಲಂಬೊ: ಥಂಗ್ಲಾಲ್ಸನ್ ಗಂಗ್ಟೆ ಅವರ ಮಿಂಚಿನ ಆಟದ ಬಲದಿಂದ ಭಾರತ ತಂಡವು 17 ವರ್ಷದೊಳಗಿನವರ ಸ್ಯಾಫ್ ಫುಟ್ಬಾಲ್ ಚಾಂಪಿಯನ್ಷಿಪ್ನಲ್ಲಿ ಫೈನಲ್ ತಲುಪಿದೆ.

ಇಲ್ಲಿ ನಡೆಯುತ್ತಿರುವ ಟೂರ್ನಿಯ ಸೆಮಿಫೈನಲ್ ಹಣಾಹಣಿಯಲ್ಲಿ ಭಾರತ 2–1ರಿಂದ ಬಾಂಗ್ಲಾದೇಶವನ್ನು ಸೋಲಿಸಿತು.ಥಂಗ್ಲಾಲ್ಸನ್ (51 ಮತ್ತು 59ನೇ ನಿಮಿಷ) ಪಂದ್ಯದ ದ್ವಿತೀಯಾರ್ಧದಲ್ಲಿ ಎರಡು ಗೋಲು ಗಳಿಸಿ ತಂಡವನ್ನು ಜಯದತ್ತ ಮುನ್ನಡೆಸಿದರು.

62ನೇ ನಿಮಿಷದಲ್ಲಿ ಮಿರಾಜುಲ್ ಇಸ್ಲಾಂ ಪೆನಾಲ್ಟಿ ಕಾರ್ನರ್ ಅವಕಾಶದಲ್ಲಿ ಗೋಲು ಗಳಿಸಿ ಬಾಂಗ್ಲಾದೇಶ ತಂಡದ ಹಿನ್ನಡೆಯನ್ನು ತಗ್ಗಿಸಿದರು. ಮೊದಲಾರ್ಧದ ಅವಧಿಯಲ್ಲಿ ಉಭಯ ತಂಡಗಳು ಹಲವು ಅವಕಾಶಗಳನ್ನು ಸೃಷ್ಟಿಸಿಕೊಂಡರೂ ಚೆಂಡನ್ನು ಗೋಲುಪೆಟ್ಟಿಗೆಗೆ ಸೇರಿಸಲು ಸಾಧ್ಯವಾಗಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.