ಮುಂಬೈ: ದಿಗ್ಗಜ ಫುಟ್‌ಬಾಲ್ ಆಟಗಾರ ಪೆಲೆ ನಿಧನಕ್ಕೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

‘ಅವರ ನಿಧನ ಫುಟ್‌ಬಾಲ್ ಕ್ಷೇತ್ರಕ್ಕೆ ಮಾತ್ರವಲ್ಲದೆ ಇಡೀ ಜಗತ್ತಿಗೆ ಅತಿ ದೊಡ್ಡ ನಷ್ಟ. ನಿಮ್ಮಂತಹ ಆಟಗಾರ ಮತ್ತೊಬ್ಬರು ಬರಲು ಸಾಧ್ಯವೇ ಇಲ್ಲ. ನಿಮ್ಮ ಪರಂಪರೆ ಶಾಶ್ವತವಾಗಿ ಉಳಿಯಲಿದೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಪೆಲೆ’ ಎಂದು ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಸಹ ಸಂತಾಪ ಸೂಚಿಸಿದ್ದು, ಎಲ್ಲದಕ್ಕೂ ಧನ್ಯವಾದ ಲೆಜೆಂಡ್, ಸದಾ ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇವೆ. ಮೂರು ಬಾರಿ ವಿಶ್ವಕಪ್ ಗೆದ್ದ ಆಟಗಾರ. ಲಕ್ಷಾಂತರ ಮಂದಿ ಫುಟ್‌ಬಾಲ್ ಆಡಲು ಪ್ರಾರಂಭಿಸಿದ್ದಕ್ಕೆ ನೀವು ಸ್ಫೂರ್ತಿ ಎಂದು ಅವರು ಹೇಳಿದ್ದಾರೆ.

ಮೂರು ವಿಶ್ವಕಪ್ ಟೂರ್ನಿಗಳಲ್ಲಿ ಬ್ರೆಜಿಲ್ ತಂಡವನ್ನು ಚಾಂಪಿಯನ್ ಆಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪೆಲೆ (82) ಗುರುವಾರ ಕ್ಯಾನ್ಸರ್‌ನಿಂದಾಗಿ ನಿಧನರಾದರು.

ಬ್ರೆಜಿಲ್ ತಂಡವು ಮೂರು ಬಾರಿ ವಿಶ್ವಕಪ್ (1958, 1962 ಮತ್ತು 1970) ಜಯಿಸಲು ಪೆಲೆ ಅವರ ಆಟವು ಪ್ರಮುಖವಾಗಿತ್ತು. ಬ್ರೆಜಿಲ್ ಪರವಾಗಿ ಅತಿ ಹೆಚ್ಚು ಗೋಲು ಗಳಿಸಿದ (77) ಅವರ ದಾಖಲೆಯನ್ನು ಈಚೆಗೆ ನಡೆದ ವಿಶ್ವಕಪ್ ಟೂರ್ನಿಯಲ್ಲಿ ನೇಮರ್ ಸರಿಗಟ್ಟಿದ್ದರು.

‘ಪೆಲೆಗೆ ನೀಡುತ್ತಿರುವ ಕಿಮೊಥೆರಪಿ ಪರಿಣಾಮ ಬೀರುತ್ತಿಲ್ಲ. ಆದ್ದರಿಂದ ಅವರನ್ನು ಪ್ಯಾಲೆಟಿವ್ ಕೇರ್ ವಿಭಾಗದಲ್ಲಿ ದಾಖಲಿಸಲಾಗಿದೆ’ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಅದನ್ನು ಕುಟುಂಬದ ಸದಸ್ಯರು ಅಲ್ಲಗಳೆದಿದ್ದರು.

ನವೆಂಬರ್ ಕೊನೆಯ ವಾರದಲ್ಲಿ ಪೆಲೆ ಅಲ್ಬರ್ಟ್ ಐನ್‌ಸ್ಟೈನ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಕರುಳಿನ ಕ್ಯಾನ್ಸರ್ ಉಲ್ಬಣಿಸಿದ್ದು ಮೂತ್ರಪಿಂಡ ಮತ್ತು ಹೃದಯಕ್ಕೆ ಸೋಂಕು ವ್ಯಾಪಿಸಿದೆ ಎಂದು ಈಚೆಗೆ ಆಸ್ಪತ್ರೆಯ ಮೂಲಗಳು ತಿಳಿಸಿದ್ದವು. 1957ರಲ್ಲಿ ರಾಷ್ಟ್ರೀಯ ತಂಡಕ್ಕೆ ಪದಾರ್ಪಣೆ ಮಾಡಿದ್ದ ಅವರು ವೃತ್ತಿಜೀವನದಲ್ಲಿ 1000ಕ್ಕೂ ಹೆಚ್ಚು ಗೋಲುಗಳನ್ನು ದಾಖಲಿಸಿದ್ದರು. 1977ರಲ್ಲಿ ನಿವೃತ್ತರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.