ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಭಾನುವಾರ ಗೋವಾದಲ್ಲಿ ನಡೆದ ಐರನ್ಮ್ಯಾನ್ 70.3 ಎಂಡ್ಯೂರೆನ್ಸ್ ರೇಸ್ ಅನ್ನು ಪೂರ್ಣಗೊಳಿಸಿದರು.

ಸ್ಫರ್ಧೆಯು 1900 ಮೀಟರ್ ಈಜು, 90 ಕಿ.ಮೀ ಸೈಕ್ಲಿಂಗ್ ಮತ್ತು 21.1 ಕಿ.ಮೀ ಓಟ ಹೀಗೆ 3 ವಿಭಾಗಗಳಲ್ಲಿ ನಡೆಯಿತು. 8 ಗಂಟೆ, 27 ನಿಮಿಷ ಮತ್ತು 32 ಸೆಕೆಂಡುಗಳಲ್ಲಿ ಈ ಎಲ್ಲ ಚಟುವಟಿಕೆಗಳನ್ನು ಪೂರ್ಣಗೊಳಿಸುವ ಮೂಲಕ ಗೆಲವು ಸಾಧಿಸಿದರು.

ಈ ಮೂಲಕ ಐರನ್ ಮ್ಯಾನ್ 70.3 ರೇಸ್ ಯಶಸ್ವಿಯಾಗಿ ಪೂರೈಸಿದ ಮೊದಲ ಜನಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.

'ಗೋವಾ ಐರನ್ ಮ್ಯಾನ್ ಕ್ರೀಡೆಗೆ ಹೆಸರುವಾಸಿ. 50ಕ್ಕೂ ಹೆಚ್ಚು ದೇಶಗಳ ಕ್ರೀಡಾಪಟುಗಳು ಈ ರೇಸ್ನಲ್ಲಿ ಪಾಲ್ಗೊಂಡಿರುವುದು ವಿಶೇಷ. ಈ ಸ್ಪರ್ಧೆಯಲ್ಲಿ ಭಾಗವಹಿಸುವುದು ಕಠಿಣ ಸವಾಲಾಗಿದ್ದು, ಕಳೆದ 4 ತಿಂಗಳಿಂದ ಕಠಿಣ ತರಬೇತಿ ಪಡೆದಿದ್ದೆ. ಸ್ವಾಮಿ ವಿವೇಕಾನಂದ ಅವರ ಸ್ಫೂರ್ತಿದಾಯಕ ಸಂದೇಶ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ 'ಫಿಟ್ ಇಂಡಿಯಾ' ಉಪಕ್ರಮವು ಇಂತಹ ಸವಾಲನ್ನು ಕೈಗೊಳ್ಳಲು ಪ್ರೇರಕ. ಫಿಟ್ ಇಂಡಿಯಾ ಅಭಿಯಾನ ನನ್ನ ಇಂದಿನ ಅಭಿಯಾನಕ್ಕೆ ಸ್ಪೂರ್ತಿ' ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಭಾರತಕ್ಕೆ ಪ್ರಶಸ್ತಿಯನ್ನು ತರಲು ಕಠಿಣ ತರಬೇತಿ ಮತ್ತು ಪರಿಶ್ರಮ ಪಡುವ ದೇಶದ ಕ್ರೀಡಾಪಟುಗಳಿಗೆ ಈ ಸಾಧನೆಯನ್ನು ತೇಜಸ್ವಿ ಸೂರ್ಯ ಅರ್ಪಿಸಿದ್ದಾರೆ.

ಪ್ರಧಾನಿ ಮೆಚ್ಚುಗೆ:

ಸಂಸದ ತೇಜಸ್ವಿ ಸೂರ್ಯ ಅವರ ಸಾಧನೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, 'ಪ್ರಶಂಸನೀಯ ಸಾಧನೆ!. ಫಿಟ್ನೆಸ್ ಸಂಬಂಧಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಇದು ಅನೇಕ ಯುವಕರಿಗೆ ಸ್ಪೂರ್ತಿ ನೀಡಲಿದೆ ಎಂಬ ಖಾತರಿ ನನಗಿದೆ' ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.