ಪ್ಯಾರಿಸ್: ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 50 ಕೆ.ಜಿ. ವಿಭಾಗದಿಂದ ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ ಅವರು ಸಲ್ಲಿಸಿರುವ ಮೇಲ್ಮನವಿ ಮೇಲಿನ ತೀರ್ಪನ್ನು ಆ. 16ಕ್ಕೆ ಕ್ರೀಡಾ ನ್ಯಾಯ ಮಂಡಳಿಯ (ಸಿಎಎಸ್) ತಾತ್ಕಾಲಿಕ ವಿಭಾಗವು ಮುಂದೂಡಿದೆ.

ವಿನೇಶ್ ಅವರು ಪ್ಯಾರಿಸ್ ಒಲಿಂಪಿಕ್ ಕೂಟದ ಮಹಿಳೆಯರ 50 ಕೆ.ಜಿ. ಫ್ರೀಸ್ಟೈಲ್ ಕುಸ್ತಿ ಫೈನಲ್ ಪ್ರವೇಶಿಸಿದ್ದರು. ಬೌಟ್‌ಗೂ ಮುನ್ನ ಅವರು ದೇಹತೂಕ ಪರೀಕ್ಷೆಯಲ್ಲಿ 50 ಗ್ರಾಂ ಹೆಚ್ಚು ತೂಗಿದ್ದರು. ಇದರಿಂದಾಗಿ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿ ಸಲಾಗಿತ್ತು. ಭಾರತಕ್ಕೆ ಚಿನ್ನ ಅಥವಾ ಬೆಳ್ಳಿ ಪದಕ ಲಭಿಸುವ ಅವಕಾಶ ಕೈಜಾರಿತ್ತು.

ಇದರಿಂದಾಗಿ ವಿನೇಶ್ ಅವರು ತಾವು ಸೆಮಿಫೈನಲ್ ಮುಕ್ತಾಯದವರೆಗೂ ದೇಹತೂಕ ನಿರ್ವಹಣೆಯನ್ನು ಮಾಡಿದ್ದ ಕಾರಣ ಬೆಳ್ಳಿಪದಕವನ್ನು ನೀಡಬೇಕು ಎಂದು ಮೇಲ್ಮನವಿ ಸಲ್ಲಿಸಿದ್ದರು. ಇದನ್ನು ಒಲಿಂಪಿಕ್ಸ್‌ನಲ್ಲಿರುವ ಕ್ರೀಡಾ ನ್ಯಾಯಮಂಡಳಿಯ ಹಂಗಾಮಿ ಪೀಠವು ವಿಚಾರಣೆ ನಡೆಸಿತ್ತು. ಆ.13ರಂದು ಪ್ರಕಟಿಸಿವುದಾಗಿ ತಿಳಿಸಿತ್ತು. ಆದರೆ, ಇಂದು ತೀರ್ಪನ್ನು ಮುಂದೂಡಿ ಆದೇಶ ಹೊರಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.