ನವದೆಹಲಿ: ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್ಗೆ ಮಹಿಳೆಯರ ವಿಭಾಗದ 50 ಮೀ. ರೈಫಲ್ 3 ಪೊಷಿಷನ್ ಟ್ರಯಲ್ಸ್ನಲ್ಲಿ ಪಾಲ್ಗೊಳ್ಳಲು ತಮಗೆ ಅವಕಾಶ ನೀಡಬೇಕೆಂದು ಕೋರಿ ಶೂಟಿಂಗ್ ಸ್ಪರ್ಧಿ ಮಾನಿನಿ ಕೌಶಿಕ್ ಎಂಬವರು ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾ ಮಾಡಿದೆ.

ಆಯ್ಕೆ ಮಾನದಂಡವನ್ನು ತಜ್ಞರೇ ರೂಪಿಸಿರುತ್ತಾರೆ. ಸದುದ್ದೇಶದಿಂದ ಸಿದ್ಧಪಡಿಸಿರುವ ಮಾನದಂಡಗಳಿಗೆ ಸಂಬಂಧಿಸಿದಂತೆ ಕೋರ್ಟ್ ಮಧ್ಯಪ್ರವೇಶಿಸಲು ಆಗದು ಎಂದು ನ್ಯಾಯಮೂರ್ತಿ ಸುಬ್ರಮಣಿಯಮ್ ಪ್ರಸಾದ್ ಹೇಳಿದ್ದಾರೆ.

‘ದೇಶದ ಹಿತಾಸಕ್ತಿಯನ್ನು ಪರಿಗಣಿಸಿ ಮತ್ತು ದೇಶದೆಲ್ಲೆಡೆಯ ಕ್ರೀಡಾಪಟುಗಳನ್ನು ಗಮನದಲ್ಲಿರಿಸಿ ನಿಯಮಗಳಿಗೆ ಅನುಗುಣವಾಗಿ ಆಯ್ಕೆ ಟ್ರಯಲ್ಸ್ ನಡೆಸಲಾಗುತ್ತದೆ. ಈ ವಿಷಯದಲ್ಲಿ ಅರ್ಜಿದಾರರನ್ನು ಉದ್ದೇಶಪೂರ್ವಕವಾಗಿ ಟ್ರಯಲ್ಸ್ನಿಂದ ಕೈಬಿಡಲಾಗಿದೆ ಎಂಬ ಬಗ್ಗೆ ನ್ಯಾಯಾಲಯಕ್ಕೆ ಮನವರಿಕೆಯಾಗುವಂಥ ಅಂಶ ಅರ್ಜಿಯಲ್ಲಿಲ್ಲ. ಆಯ್ಕೆ ಪ್ರಕ್ರಿಯೆಯಲ್ಲಿ ಪಕ್ಷಪಾತ ನಡೆದಿದೆ ಎಂಬ ಅಂಶವೂ ಇಲ್ಲ ಎಂಬುದು ಕೋರ್ಟ್ನ ಅಭಿಪ್ರಾಯ’ ಎಂದು ನ್ಯಾ. ಪ್ರಸಾದ್ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.