ನವದೆಹಲಿ: ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ಗೆ ಭಾರತ ಬಾಕ್ಸಿಂಗ್ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

ಭಾರತ ತಂಡದಲ್ಲಿ ತಮಗೆ ಸ್ಥಾನ ನೀಡದಿರುವುದನ್ನು ಪ್ರಶ್ನಿಸಿ ಮೂವರು ಮಹಿಳಾ ಬಾಕ್ಸರ್‌ಗಳಾದ ಮಂಜು ರಾಣಿ, ಶಿಕ್ಷಾ ನರ್ವಾಲ್ ಮತ್ತು ಪೂನಂ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರತಿಭಾ ಎಂ. ಸಿಂಗ್ ಮಂಗಳವಾರ ತೀರ್ಪು ನೀಡಿದರು.

‘ರಿಟ್ ಅರ್ಜಿಗೆ ಸಂಬಂಧಿಸಿದಂತೆ ಮಧ್ಯಪ್ರವೇಶಿಸುವ ಅವಕಾಶ ಬಹಳ ಸೀಮಿತ ಎಂದು ಕೋರ್ಟ್ ಗಮನಿಸಿದೆ. ತಂಡದ ಆಯ್ಕೆ ಪ್ರಕ್ರಿಯೆಗೆ ಅನುಸರಿಸಿದ ಮಾನದಂಡವನ್ನು ಪರಿಶೀಲಿಸಲಾಗಿದೆ. ಈಗಾಗಲೇ ಆಯ್ಕೆಯಾಗಿರುವ ಬಾಕ್ಸರ್‌ಗಳು ಭಾರತ ತಂಡವನ್ನು ಪ್ರತಿನಿಧಿಸಲು ಅರ್ಹರಾಗಿದ್ದಾರೆ. ರಿಟ್ ಅರ್ಜಿ ಸಲ್ಲಿಸಿದ್ದ ಮೂವರು ಬಾಕ್ಸರ್‌ಗಳು ರಿಸರ್ವ್ ಬಾಕ್ಸರ್‌ಗಳ ಪಟ್ಟಿಯಲ್ಲೇ ಉಳಿಯಬೇಕಾಗುತ್ತದೆ’ ಎಂದು ಹೈಕೋರ್ಟ್ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.