ನವದೆಹಲಿ: ಕೊಲೆ ಆರೋಪದಲ್ಲಿ ಬಂಧನದಲ್ಲಿರುವ ಕುಸ್ತಿಪಟು ಸುಶೀಲ್ ಕುಮಾರ್ ಜೊತೆ ತನ್ನ ಸಿಬ್ಬಂದಿಯು ಫೋಟೊ ತೆಗೆಸಿಕೊಂಡಿದ್ದರ ಕುರಿತು ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

‘ದೆಹಲಿ ಪೊಲೀಸರ ವಿಶೇಷ ತಂಡ ಮತ್ತು ಸಶಸ್ತ್ರ ಪೊಲೀಸರ ಮೂರನೇ ಬೆಟಾಲಿಯನ್ ಉಪಸ್ಥಿತಿಯಲ್ಲಿ ಸುಶೀಲ್ ಅವರನ್ನು ತಿಹಾರ್ ಜೈಲಿಗೆ ಸ್ಥಳಾಂತರಿಸುವಾಗ ಮಾಂಡೋಲಿ ಜೈಲು ಆವರಣದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ‘ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಶೀಲ್ ಕುಮಾರ್ ಮತ್ತು ಪೊಲೀಸರು ಮಾಸ್ಕ್ ಧರಿಸದೆ ನಿಂತಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

‘ಘಟನೆ ಕುರಿತು ಸ್ವಯಂಪ್ರೇರಿತ ತನಿಖೆ ಆರಂಭಿಸಲಾಗಿದೆ. ತನಿಖೆಯ ವರದಿ ಬಳಿಕ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ‘ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ನಡೆದ ಪ್ರಕರಣದಲ್ಲಿ 23 ವರ್ಷದ ಸಾಗರ್ ಧನಕರ್ ಮತ್ತು ಇಬ್ಬರು ಗೆಳೆಯರ ಮೇಲೆ, ಒಲಿಂಪಿಕ್ಸ್ ಪದಕ ವಿಜೇತ ಸುಶೀಲ್ ಕುಮಾರ್ ಮತ್ತು ಸಹಚರರು ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಆ ಬಳಿಕ ಸಾಗರ್ ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.