ಮುಂಬೈ: ಸುಲಭವಾಗಿ ಹಣ ಗಳಿಸಲು ಗೇಮಿಂಗ್ ಆ್ಯಪ್ ಬಳಸುವಂತೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಪ್ರಚಾರ ಮಾಡುತ್ತಿದ್ದಾರೆ ಎಂಬ ನಕಲಿ ವಿಡಿಯೊ ಹರಿದಾಡಿದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಆನ್ಲೈನ್ ಆಟದ ಸೇವೆ ಒದಗಿಸುವ ಜಾಲತಾಣ ಮತ್ತು ಫೇಸ್ಬುಕ್ ಪುಟದ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಪಶ್ಚಿಮ ವಲಯದ ಸೈಬರ್ ಪೊಲೀಸ್ ಠಾಣೆಯಲ್ಲಿ ಸಚಿನ್ ಅವರ ಆಪ್ತ ಸಹಾಯಕ ಮಂಗಳವಾರ ಸಲ್ಲಿಸಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 500 (ಮಾನಹಾನಿ) ಮತ್ತು ಐಟಿ ಕಾಯ್ದೆಯ ಸೆಕ್ಷನ್ 66 (ಎ) (ಸಂವಹನ ಸೇವೆಯ ಮೂಲಕ ಆಕ್ರಮಣಕಾರಿ ಸಂದೇಶ ಕಳುಹಿಸುವುದು) ಅಡಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತಂತ್ರಜ್ಞಾನ ದುರುಪಯೋಗಪಡಿಸಿಕೊಂಡು ಗೇಮಿಂಗ್ ಆ್ಯಪ್ ಉತ್ತೇಜಿಸುವಂತೆ ಸಚಿನ್ ತೆಂಡೂಲ್ಕರ್ ಪ್ರಚಾರ ಮಾಡುತ್ತಿದ್ದಾರೆ ಎಂಬ ನಕಲಿ ವಿಡಿಯೊ ಹರಿಯಬಿಡಲಾಗಿತ್ತು.

ಇತ್ತೀಚೆಗೆ ಈ ವಿಷಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಸಚಿನ್ ಸಾಮಾಜಿಕ ಜಾಲತಾಣಗಳ ತಮ್ಮ ಖಾತೆಯಲ್ಲಿ ವಿಡಿಯೊ ಪೋಸ್ಟ್ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.