ನವದೆಹಲಿ: ಭುವನೇಶ್ವರದಲ್ಲಿ ಮುಂದಿನ ತಿಂಗಳು ನಿಗದಿಯಾಗಿರುವ ಎಫ್‌ಐಎಚ್ ಪುರುಷರ ಜೂನಿಯರ್ ವಿಶ್ವಕಪ್ ಹಾಕಿ ಟೂರ್ನಿಯಲ್ಲಿ ಪಾಲ್ಗೊಳ್ಳಲಿರುವ ವಿದೇಶಿ ತಂಡಗಳಿಗೆ ಕ್ವಾರಂಟೈನ್‌ನಿಂದ ವಿನಾಯಿತಿ ನೀಡಲಾಗಿದೆ. ತಮ್ಮ ಆಟಗಾರರಿಗೆ ಕೋವಿಡ್ ರೋಗಲಕ್ಷಣಗಳ ಕುರಿತು ಆಯಾ ತಂಡದವರೇ ಮೇಲ್ವಿಚಾರಣೆ ನಡೆಸಬೇಕಾಗುತ್ತದೆ.

ಈ ಕುರಿತು ಈ ತಿಂಗಳ ಆರಂಭದಲ್ಲಿ ಕ್ರೀಡಾ ಸಚಿವಾಲಯದ ಜಂಟಿ ಕಾರ್ಯದರ್ಶಿ ಎಲ್.ಎಸ್.ಸಿಂಗ್ ಅವರು ಸಲ್ಲಿಸಿದ ಮನವಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಸ್ಪಂದಿಸಿ ಈ ನಿರ್ಧಾರ ತೆಗೆದುಕೊಂಡಿದೆ. ಅಲ್ಲದೆ ವಿದೇಶಗಳಿಂದ ಆಗಮಿಸುವ ಎಲ್ಲ ತಂಡಗಳು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಸಚಿವಾಲಯ ಸೂಚಿಸಿದೆ.

ಜೂನಿಯರ್ ವಿಶ್ವಕಪ್ ಹಾಕಿ ಟೂರ್ನಿಯ ಪಂದ್ಯಗಳು ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನವೆಂಬರ್ 25ರಿಂದ ಡಿಸೆಂಬರ್ 5ರವರೆಗೆ ನಡೆಯಲಿವೆ. ಆತಿಥೇಯ ಭಾರತವು ಟೂರ್ನಿಯ ಹಾಲಿ ಚಾಂಪಿಯನ್ ಆಗಿದೆ.

ಭಾರತದಲ್ಲಿ ತಂಗಿದ್ದ ವೇಳೆಯಲ್ಲಿ ಯಾವುದೇ ಭಾಗೀದಾರರಿಗೆ ಕೊರೊನಾ ಲಕ್ಷಣಗಳು ಕಂಡುಬಂದರೆ, ಅವರನ್ನು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಕ್ರೀಡಾ ಇಲಾಖೆಯು ಅವರಿಗೆ ಕ್ವಾರಂಟೈನ್ ವ್ಯವಸ್ಥೆ ಮಾಡಲಿದೆ‘ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರವಾಲ್ ಅವರು ಸಿಂಗ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಆತಿಥೇಯ ಭಾರತ ಅಲ್ಲದೆ ಕೊರಿಯಾ, ಮಲೇಷ್ಯಾ, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಈಜಿಪ್ಟ್, ಬೆಲ್ಜಿಯಂ, ಫ್ರಾನ್ಸ್, ಜರ್ಮನಿ, ನೆದರ್ಲೆಂಡ್ಸ್, ಸ್ಪೇನ್, ಅಮೆರಿಕ, ಕೆನಡಾ, ಚಿಲಿ, ಅರ್ಜೆಂಟೀನಾ ಮತ್ತು ಪೋಲೆಂಡ್ ತಂಡಗಳು ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.