ನವದೆಹಲಿ: ಕ್ರೀಡೆಯಲ್ಲಿ ಉದ್ದೀಪನ ಮದ್ದು ಸೇವನೆ ಪ್ರಕರಣಗಳಿಗೆ ಸಂಬಂಧಿಸಿದ ಮಾನದಂಡಗಳ ಅನುಷ್ಠಾನಕ್ಕಾಗಿ ರಾಷ್ಟ್ರೀಯ ವೇದಿಕೆಯೊಂದನ್ನು ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸಿದೆ. ಉನೆಸ್ಕೊ ಸಾಮಾನ್ಯ ಸಭೆಯಲ್ಲಿ ಅಂಗೀಕರಿಸಿದ ನಿರ್ಣಯಗಳ ಅನುಸಾರ ಸ್ಥಾಪನೆಯಾಗುವ ಈ ವೇದಿಕೆಗೆ ಕೇಂದ್ರ ಕ್ರೀಡಾ ಇಲಾಖೆಯ ಕಾರ್ಯದರ್ಶಿ ಅಧ್ಯಕ್ಷರಾಗಿರುವರು.

ಭಾರತ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷ ಮತ್ತು ರಾಷ್ಟ್ರೀಯ ಉದ್ದೀಪನ ಮದ್ದು ಸೇವನೆ ತಡೆ ಘಟಕದ (ನಾಡಾ) ಮಹಾನಿರ್ದೇಶಕರು ವೇದಿಕೆಯ ಸದಸ್ಯರಾಗಿರುವರು.10 ಮಂದಿಯ ವೇದಿಕೆಯಲ್ಲಿ ಗೃಹ, ಹಣಕಾಸು, ವಿದೇಶಾಂಗ ವ್ಯವಹಾರ, ಮಾನವ ಸಂಪನ್ಮೂಲ, ಆರೋಗ್ಯ ಮತ್ತು ಕಾನೂನು ಇಲಾಖೆಯ ಪ್ರತಿನಿಧಿಗಳಿಗೂ ಸದಸ್ಯತ್ವ ಇರಲಿದೆ. ಈ ಸಂಬಂಧ ಜೂನ್ 27ರಂದು ಕ್ರೀಡಾ ಸಚಿವಾಲಯವು ಸಂಬಂಧಪಟ್ಟ ಇಲಾಖೆಗಳಿಗೆ ಪತ್ರ ಕಳುಹಿಸಿದೆ.

ಉದ್ದೀಪನ ಮದ್ದು ತಡೆಗೆ ಸಂಬಂಧಿಸಿದ ಅಂತರರಾಷ್ಟ್ರೀಯ ಸಮಾವೇಶದ ನಿರ್ಣಯಗಳನ್ನು 2005ರಲ್ಲಿ ನಡೆದ ಯುನೆಸ್ಕೊ ಸಾಮಾನ್ಯ ಸಭೆಯಲ್ಲಿ ಅಂಗೀಕರಿಸಲಾಗಿತ್ತು. ಈ ನಿರ್ಣಯಗಳಿಗೆ ಭಾರತವೂ ಸಹಿ ಹಾಕಿತ್ತು. ಕ್ರೀಡೆಯಲ್ಲಿ ಉದ್ದೀಪನ ಮದ್ದು ಸೇವನೆಯನ್ನು ತಡೆಯುವುದು ಮತ್ತು ಅದರ ವಿರುದ್ಧ ಹೋರಾಡುವುದುಅಂತರರಾಷ್ಟ್ರೀಯ ಸಮಾವೇಶದ ಉದ್ದೇಶವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.