ನವದೆಹಲಿ: ಭಾರತದ ಪಿ.ವಿ.ಸಿಂಧು ಹಾಗೂ ಕಿದಂಬಿ ಶ್ರೀಕಾಂತ್ ಅವರು ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಗೆ ಕ್ರಮವಾಗಿ ಮಹಿಳಾ ಮತ್ತು ಪುರುಷರ ಸಿಂಗಲ್ಸ್ ವಿಭಾಗಗಳಲ್ಲಿ ಅಗ್ರಶ್ರೇಯಾಂಕ ಪಡೆದಿದ್ದಾರೆ.

ಮುಂದಿನ ವರ್ಷ ಜನವರಿ 11ರಿಂದ 16ರವರೆಗೆ ದೇಶದ ರಾಜಧಾನಿಯಲ್ಲಿ ಈ ಟೂರ್ನಿ ನಿಗದಿಯಾಗಿದೆ. ಲಕ್ಷ್ಯ ಸೇನ್ ಮತ್ತು ವಿಶ್ವ ಚಾಂಪಿಯನ್ ಆಟಗಾರ ಸಿಂಗಪುರದ ಲೋಹ್ಕೀನ್ ಯಿವ್ ಕೂಡ ಟೂರ್ನಿಯ ಪ್ರಮುಖ ಆಕರ್ಷಣೆಯಾಗಲಿದ್ದಾರೆ.

ಬಿಡಬ್ಲ್ಯುಎಫ್ ವಿಶ್ವ ಟೂರ್ ಸೂಪರ್ 500ನ ಭಾಗವಾಗಿ ನಡೆಯಲಿರುವ ಟೂರ್ನಿಗೆ ಕೋವಿಡ್ ಹಿನ್ನೆಲೆಯಲ್ಲಿ ಪ್ರೇಕ್ಷಕರಿಗೆ ನಿರ್ಬಂಧ ವಿಧಿಸಲಾಗಿದೆ.

ಪುರುಷರ ಸಿಂಗಲ್ಸ್‌ನಲ್ಲಿ ಬಿ.ಸಾಯಿ ಪ್ರಣೀತ್ ಅವರಿಗೆ ಎರಡನೇ ಶ್ರೇಯಾಂಕ ನೀಡಲಾಗಿದೆ. ಎಚ್.ಎಸ್. ಪ್ರಣಯ್, ಪರುಪಳ್ಳಿ ಕಶ್ಯಪ್, ಸಮೀರ್ ವರ್ಮಾ ಮತ್ತು ಇಂಡೊನೇಷ್ಯಾದ ಟಾಮಿ ಸುಗಿಯರ್ತೊ ಕೂಡ ಕಣಕ್ಕಿಳಿಯಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.