ನವದೆಹಲಿ:ಭಾರತ ಒಲಿಂಪಿಕ್ಸ್ ಸಂಸ್ಥೆಯ (ಐಒಎ) ಕರಡು ಸಂವಿಧಾನದ ಅವಳಡಿಕೆ ಕುರಿತ ಆಕ್ಷೇಪಣೆ ಮತ್ತು ಅದಕ್ಕೆ ಸಂಬಂಧಿಸಿದ ಇತರ ವಿಷಯಗಳ ವಿಚಾರಣೆಯನ್ನು ಡಿ.7 ರಂದು ನಡೆಸಲಾಗುವುದು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಹಾಗೂ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ಅವರ ಮೇಲ್ವಿಚಾರಣೆಯಲ್ಲಿ ಐಒಎ ನಿಯಮಾವಳಿಗಳಿಗೆ ತಿದ್ದುಪಡಿ ಮಾಡಲಾಗಿದೆ. ಪರಿಷ್ಕೃತ ಕರಡು ಸಂವಿಧಾನದ ಅಳವಡಿಕೆಗೆ ಗುರುವಾರ ನಡೆದ ಐಒಎ ವಿಶೇಷ ಸಾಮಾನ್ಯ ಸಭೆಯಲ್ಲಿ ಅಂಗೀಕಾರ ದೊರೆತಿತ್ತು.

ಆದರೆ ಕರಡು ಸಂವಿಧಾನಕ್ಕೆ ಕೆಲವು ಸದಸ್ಯರು ಅಕ್ಷೇಪ ವ್ಯಕ್ತಪಡಿಸಿದ್ದರು. ಸುಪ್ರೀಂಕೋರ್ಟ್ನ ಒತ್ತಾಯಕ್ಕೆ ಮಣಿದು ಅಂಗೀಕರಿಸಿದ್ದಾಗಿ ಹೇಳಿಕೆ ನೀಡಿದ್ದರು.

‘ಆಕ್ಷೇಪಣೆಗಳಿಗೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಡಿ.7 ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು’ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರಿದ್ದ ಪೀಠ ಹೇಳಿತು. ‘ಕರಡು ಸಂವಿಧಾನದಲ್ಲಿ ಕೆಲವು ಅನಧಿಕೃತ ತಿದ್ದುಪಡಿ ಮಾಡಲಾಗಿದೆ’ ಎಂಬ ಆರೋಪಕ್ಕೆ ಸಂಬಂಧಿಸಿದ ಅರ್ಜಿಯ ತುರ್ತು ವಿಚಾರಣೆಗೆ ಪೀಠ ನಿರಾಕರಿಸಿತು.

ಐಒಎ ನಿಯಮಾವಳಿಗಳಿಗೆ ತಿದ್ದುಪಡಿ ತಂದು ಡಿಸೆಂಬರ್ ಒಳಗಾಗಿ ಚುನಾವಣೆ ನಡೆಸದಿದ್ದರೆ ಅಮಾನತು ಕ್ರಮ ಕೈಗೊಳ್ಳಲಾಗುವುದು ಎಂದು ಐಒಸಿಯು ಅಂತಿಮ ಎಚ್ಚರಿಕೆ ನೀಡಿತ್ತು. ಡಿ.10 ರಂದು ಐಒಎಗೆ ಚುನಾವಣೆಗೆ ನಡೆಸಲು ಸುಪ್ರೀಂಕೋರ್ಟ್ ಈಗಾಗಲೇ ಒಪ್ಪಿಗೆ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.