ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾಲಯ ಆಯೋಜಿಸಿರುವ ಪುರುಷರ ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನ ಪಂದ್ಯಗಳು ಶನಿವಾರ ಆರಂಭವಾಗಲಿವೆ. ಶುಕ್ರವಾರ ಟೂರ್ನಿ ಉದ್ಘಾಟನೆಯಾಗಲಿದೆ.

ನೇತ್ರಾವತಿ ನದಿ ತಟದಲ್ಲಿ ಹೊಸದಾಗಿ ನಿರ್ಮಿಸಿರುವ ಮೈದಾನದ 6 ಅಂಗಣಗಳಲ್ಲಿ ಪಂದ್ಯಗಳು ನಡೆಯಲಿದ್ದು, 89 ವಿಶ್ವವಿದ್ಯಾಲಯಗಳು ಸೆಣಸಲಿವೆ. ಇದೇ 17ರ ತನಕ ಟೂರ್ನಿ ಆಯೋಜನೆಯಾಗಿದೆ.

ಆತಿಥೇಯ ಮಂಗಳೂರು ವಿವಿ, ಬೆಳಗಾವಿಯ ವಿಶ್ವೇಶ್ವರಯ್ಯ ವಿವಿ, ಬೆಂಗಳೂರು ಉತ್ತರ ವಿವಿ, ಬೆಂಗಳೂರು ವಿವಿ, ಮೈಸೂರು ವಿವಿ, ಶಿವಮೊಗ್ಗದ ಕುವೆಂಪು ವಿವಿ, ಗುಲಬರ್ಗಾ ವಿವಿ, ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿ, ದಾವಣಗೆರೆ ವಿವಿ, ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ, ಬೆಂಗಳೂರಿನ ಕೃಷಿ ವಿವಿ, ತುಮಕೂರು ವಿವಿ, ಮಂಡ್ಯ ವಿವಿ, ಬೆಳಗಾವಿಯ ರಾಣಿ ಚನ್ನಮ್ಮ ವಿವಿ, ಧಾರವಾಡದ ಕರ್ನಾಟಕ ವಿವಿ ತಂಡಗಳು ಪಾಲ್ಗೊಳ್ಳಲಿವೆ.

ನೇರ ಪ್ರಸಾರ: ಇಎಸ್‌ಐ ಸ್ಪೋರ್ಟ್ಸ್ ಸಂಸ್ಥೆಯ ಯುಟ್ಯೂಬ್ ಚಾನಲ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.