ನವದೆಹಲಿ: ಭಾರತ ಕ್ರಿಕೆಟ್ ತಂಡದ ವೇಗಿ ಇಶಾಂತ್ ಶರ್ಮಾ ಸೇರಿದಂತೆ 29 ಅಥ್ಲೀಟುಗಳನ್ನು ಈ ಬಾರಿಯ ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ. ಪ್ರಶಸ್ತಿ ಆಯ್ಕೆ ಸಮಿತಿಯ ಸಭೆಯು ಮಂಗಳವಾರ ಇಲ್ಲಿನ ಭಾರತ ಕ್ರೀಡಾ ಪ್ರಾಧಿಕಾರದ ಮುಖ್ಯಕಚೇರಿಯಲ್ಲಿ ನಡೆಯಿತು.

ರಿಕರ್ವ್ ಆರ್ಚರಿ ಪಟು ಅತನು ದಾಸ್, ಭಾರತ ಹಾಕಿ ತಂಡದ ಆಟಗಾರ್ತಿ ದೀಪಿಕಾ ಠಾಕೂರ್, ಕಬಡ್ಡಿ ಆಟಗಾರ ದೀಪಕ್ ಹೂಡಾ ಹಾಗೂ ಟೆನಿಸ್ ಆಟಗಾರ ದಿವಿಜ್ ಶರಣ್ ಅವರನ್ನು ಪ್ರಶಸ್ತಿಗಾಗಿ ಶಿಫಾರಸು ಮಾಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

31 ವರ್ಷದ ಇಶಾಂತ್ ಅವರು 97 ಟೆಸ್ಟ್ ಹಾಗೂ 80 ಏಕದಿನ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ.ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 400ಕ್ಕೂ ಹೆಚ್ಚು ವಿಕೆಟ್‌ಗಳನ್ನು ಗಳಿಸಿದ್ದಾರೆ.

ಒಲಿಂಪಿಕ್ ಕಂಚಿನ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್ ಹಾಗೂ ಮಾಜಿ ವಿಶ್ವ ಚಾಂಪಿಯನ್ ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಅವರಿಗೂ ಪ್ರಶಸ್ತಿ ನೀಡಲು ಸಮಿತಿಯು ಒಲವು ತೋರಿದೆ ಎನ್ನಲಾಗಿದೆ. ಆದರೆ ಈ ಇಬ್ಬರೂ ಅಥ್ಲೀಟ್‌ಗಳು ಈಗಾಗಲೇ ಖೇಲ್‌ರತ್ನ ಪ್ರಶಸ್ತಿಗೆ ಭಾಜನರಾಗಿರುವುದಿಂದ, ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿಯನ್ನು ಸಚಿವ ಕಿರಣ್ ರಿಜಿಜು ಅವರಿಗೆ ವಹಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.