ಮಧುಗಿರಿ: ಪಟ್ಟಣದ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆಯುತ್ತಿದ್ದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಅಭ್ಯಾಸ ನಿರತನಾಗಿದ್ದ ವಿದ್ಯಾರ್ಥಿ ಎಸೆದ ಜಾವೆಲಿನ್ (ಭರ್ಚಿ) ಅಲ್ಲಿಯೇ ಇದ್ದ ವಿದ್ಯಾರ್ಥಿಯೊಬ್ಬನ ತಲೆಗೆ ಹೊಕ್ಕಿದೆ.

ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿ ಇಂದ್ರೇಶ್‌ನನ್ನು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈತ ಮಧುಗಿರಿಯ ಜೂಪಿಟರ್ ಪಬ್ಲಿಕ್ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಕಲಿಯುತ್ತಿದ್ದಾನೆ.

ಕ್ರೀಡಾಂಗಣದಲ್ಲಿ ಭರ್ಚಿ ಎಸೆತದ (ಜಾವೆಲಿನ್ ಥ್ರೋ) ತರಬೇತಿ ಪಡೆಯುತ್ತಿದ್ದ ಕಾರ್ಡಿಯಲ್ ಶಾಲೆಯ ವಿದ್ಯಾರ್ಥಿ ವೇಗವಾಗಿ ಎಸೆದ ಭರ್ಚಿ, ಬೆನ್ನು ತಿರುಗಿಸಿಕೊಂಡು ಕುಳಿತಿದ್ದ ಇಂದ್ರೇಶ್ ತಲೆಗೆ ಹೊಕ್ಕಿದೆ. ತೀವ್ರ ರಕ್ತಸ್ರಾವದಿಂದ ಆತ ಸ್ಥಳದಲ್ಲೇ ಪ್ರಜ್ಞೆ ತಪ್ಪಿದ. ತಕ್ಷಣ ದೈಹಿಕ ಶಿಕ್ಷಣ ಶಿಕ್ಷಕ ಪ್ರತಾಪ್ ಹಾಗೂ ಇತರ ವಿದ್ಯಾರ್ಥಿಗಳು ಆತನನ್ನು ತಾಲ್ಲೂಕು ಆಸ್ಪತ್ರೆಗೆ ಕೊರೆದೊಯ್ದು ಚಿಕಿತ್ಸೆ ಕೊಡಿಸಿದರು. ವೈದ್ಯರ ಸೂಚನೆಯಂತೆ ವಿದ್ಯಾರ್ಥಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್‌ಗೆ ಕರೆದೊಯ್ಯಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.