ನವದೆಹಲಿ: ‘ಹಾಕಿ ಸ್ಟಿಕ್‌ನೊಂದಿಗೆ ಅವರ ಜಾದೂವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ’ ಎಂದು ಹಾಕಿ ದಂತಕಥೆ ಧ್ಯಾನ್ ಚಂದ್ ಅವರನ್ನು ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಧ್ಯಾನ್ ಚಂದ್ ಅವರ 115ನೇ ಜನ್ಮ ದಿನಾಚರಣೆ, ರಾಷ್ಟ್ರೀಯ ಕ್ರೀಡಾ ದಿನದ ಸಂದರ್ಭದಲ್ಲಿ ಟ್ವೀಟ್ ಮಾಡಿದ ಅವರು, ‘ಇಂದು ರಾಷ್ಟ್ರೀಯ ಕ್ರೀಡಾ ದಿನ. ಮೇಜರ್ ಧ್ಯಾನ್ ಚಂದ್ ಅವರಿಗೆ ನಾವು ಗೌರವ ಸಲ್ಲಿಸುತ್ತಿದ್ದೇವೆ. ಹಾಕಿ ಸ್ಟಿಕ್‌ನೊಂದಿಗೆ ಅವರ ಜಾದೂವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ನಮ್ಮ ಪ್ರತಿಭಾನ್ವಿತ ಅಥ್ಲೀಟ್‌ಗಳ ಯಶಸ್ಸಿಗೆ ಅವರ ಕುಟುಂಬದವರು, ತರಬೇತುದಾರರು, ಇತರ ಸಿಬ್ಬಂದಿ ಅತ್ಯುತ್ತಮ ಬೆಂಬಲ ನೀಡುತ್ತಿರುವುದನ್ನು ಶ್ಲಾಘಿಸುವ ದಿನವೂ ಇದಾಗಿದೆ’ ಎಂದು ಉಲ್ಲೇಖಿಸಿದ್ದಾರೆ.

ಧ್ಯಾನ್ ಚಂದ್ ಹುಟ್ಟಿದ ದಿನವಾದ ಆಗಸ್ಟ್ 29 ಅನ್ನು ದೇಶದಲ್ಲಿ ‘ರಾಷ್ಟ್ರೀಯ ಕ್ರೀಡಾ ದಿನ’ವಾಗಿ ಆಚರಿಸಲಾಗುತ್ತಿದೆ. 2012ರಲ್ಲಿ ಮೊದಲ ಬಾರಿಗೆ ದೇಶದಲ್ಲಿ ಅಧಿಕೃತವಾಗಿ ರಾಷ್ಟ್ರೀಯ ಕ್ರೀಡಾ ದಿನ ಆಚರಿಸಲು ಆರಂಭಿಸಲಾಗಿತ್ತು.

ಇದನ್ನೂ ಓದಿ:ಹಾಕಿ ಮಾಂತ್ರಿಕನ ನೆನಪಿನಲ್ಲಿ...

'ಇಂದು, ವಿವಿಧ ಕ್ರೀಡೆಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ಮತ್ತು ನಮ್ಮ ದೇಶವನ್ನು ಹೆಮ್ಮೆಪಡುವಂತೆ ಮಾಡಿದ ಎಲ್ಲ ಕ್ರೀಡಾಪಟುಗಳ ಗಮನಾರ್ಹ ಸಾಧನೆಗಳ ಸಂಭ್ರಮಾಚರಿಸುವ ದಿನವೂ ಹೌದು’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಮೋದಿ ಉಲ್ಲೇಖಿಸಿದ್ದಾರೆ.

ಕ್ರೀಡೆಯನ್ನು ಜನಪ್ರಿಯಗೊಳಿಸಲು ಮತ್ತು ಕ್ರೀಡಾ ಪ್ರತಿಭೆಗಳನ್ನು ಬೆಂಬಲಿಸಲು ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದೂ ಪ್ರಧಾನಿ ಹೇಳಿದ್ದಾರೆ.

ಇದನ್ನೂ ಓದಿ:ಮೇಜರ್ ಧ್ಯಾನ್ ಚಂದ್‌ಗೆ ಭಾರತ ರತ್ನ ನೀಡಲು ಒತ್ತಾಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.