ದೊಡ್ಡಬಳ್ಳಾಪುರ: ಕರ್ನಾಟಕ ಅಮೆಚೂರ್ ಬಾಡಿಬಿಲ್ಡರ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ಕೋಲಾರದಲ್ಲಿ ನಡೆದ 67ನೇ ರಾಜ್ಯ ಅಮೆಚೂರ್ ಬಾಡಿ ಬಿಲ್ಡಿಂಗ್ ಮತ್ತು ಪಿಟ್ನೆಸ್ ಚಾಂಪಿಯನ್‍ಷಿಪ್‍ನಲ್ಲಿ ಭಾಗವಹಿಸಿದ್ದ ಇಲ್ಲಿನ ಶ್ರೀದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ತೃತೀಯ ವರ್ಷದ ಬಿಕಾಂ ವಿದ್ಯಾರ್ಥಿ ಎನ್.ವಿಷ್ಣು ಬೆಳ್ಳಿ ಹಾಗೂ ಕಂಚಿನ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಪ್ರತಿನಿಧಿಸಿದ್ದ ವಿಷ್ಣು, ಟಾಲ್ ಗ್ರೂಫ್ ವಿಭಾಗದಲ್ಲಿ ಕರ್ನಾಟಕ ಯುವಶ್ರೀ ಬಿರುದುನೊಂದಿಗೆ ದ್ವಿತೀಯ ಹಾಗೂ ಕರ್ನಾಟಕ ಕಿಶೋರ ಬಿರುದುನೊಂದಿಗೆ ತೃತೀಯ ಸ್ಥಾನ ಪಡೆದು ಟ್ರೋಫಿ, ಪದಕ ಮತ್ತು ಪ್ರಮಾಣ ಪತ್ರ ಪಡೆದಿದ್ದಾರೆ.

ಸಾಧಕ ವಿದ್ಯಾರ್ಥಿಯನ್ನು ದೇವರಾಜ ಅರಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಆರ್.ಎಲ್.ಜಾಲಪ್ಪ, ಕಾರ್ಯದರ್ಶಿ ಜಿ.ಎಚ್.ನಾಗರಾಜ, ಸಿಇಒ ಜೆ.ನಾಗೇಂದ್ರಸ್ವಾಮಿ, ನಿರ್ದೇಶಕ ಜೆ.ರಾಜೇಂದ್ರ, ಪ್ರಾಂಶುಪಾಲ ಪ್ರೊ.ಕೆ.ಆರ್.ರವಿಕಿರಣ್ ಅಭಿನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.