ಸ್ಟಾವೆಂಜರ್, ನಾರ್ವೆ: ಭಾರತದ ಗ್ರ್ಯಾಂಡ್ಮಾಸ್ಟರ್ ವಿಶ್ವನಾಥನ್ ಆನಂದ್ ಇಲ್ಲಿ ನಡೆಯುತ್ತಿರುವ ನಾರ್ವೆ ಚೆಸ್ ಟೂರ್ನಿಯ ಕ್ಲಾಸಿಕಲ್ ವಿಭಾಗದಲ್ಲಿ ಸತತ ಎರಡನೇ ಜಯ ಸಂಪಾದಿಸಿದರು.

ಬುಧವಾರ ನಡೆದ ಎರಡನೇ ಸುತ್ತಿನ ಪಂದದಲ್ಲಿ 52 ವರ್ಷದ ಆನಂದ್, 36 ನಡೆಗಳಲ್ಲಿ ಬಲ್ಗೇರಿಯಾದ ವೆಸಲಿನ್ ಟೊಪಲೊವ್ ಅವರನ್ನು ಮಣಿಸಿದರು. ಇದರೊಂದಿಗೆ ಆರು ಪಾಯಿಂಟ್ಸ್ ಗಳಿಸಿ ಅಗ್ರಸ್ಥಾನಕ್ಕೇರಿದರು.

ಐದು ಬಾರಿಯ ವಿಶ್ವ ಚಾಂಪಿಯನ್ ಆನಂದ್, ಮೊದಲ ಪಂದ್ಯದಲ್ಲಿ ಫ್ರಾನ್ಸ್ನ ವ್ಯಾಚಿರ್ ಲ್ಯಾಗ್ರೇವ್ ಅವರನ್ನು ಸೋಲಿಸಿದ್ದರು.

ಇನ್ನೊಂದು ಪಂದ್ಯದಲ್ಲಿ ಅಮೆರಿಕದ ವೆಸ್ಲಿ ಸೊ, ವಿಶ್ವ ಚಾಂಪಿಯನ್, ನಾರ್ವೆಯ ಮ್ಯಾಗ್ನಸ್ ಕಾರ್ಲ್ಸನ್ ಅವರನ್ನು ಸೋಲಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಇಬ್ಬರ ನಡುವಣ ಹಣಾಹಣಿಯು ಡ್ರಾನಲ್ಲಿ ಅಂತ್ಯವಾಗಿತ್ತು. ಬಳಿಕ ನಡೆದ ಆರ್ಮೆಗೆಡನ್ ಪಂದ್ಯದಲ್ಲಿ ವೆಸ್ಲಿ ಗೆಲುವು ಸಾಧಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.