ಬೆಂಗಳೂರು: ಸುಮಿತ್ ಅಂತಿಲ್ ಮತ್ತು ಪುಷ್ಪೇಂದ್ರ ಸಿಂಗ್ ಅವರು ಇಲ್ಲಿ ನಡೆಯುತ್ತಿರುವ ಇಂಡಿಯನ್ ಓಪನ್ ಪ್ಯಾರಾ ಅಥ್ಲೆಟಿಕ್ಸ್ ಇಂಟರ್ನ್ಯಾಷನಲ್ ಚಾಂಪಿಯನ್ಷಿಪ್ನಲ್ಲಿ ವಿಶ್ವದಾಖಲೆ ಮಾಡಿದರು.

ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೂಟದಲ್ಲಿ ಶನಿವಾರ ಸುಮಿತ್ ಅವರು ಎಫ್64 ವಿಭಾಗದ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ 70.17 ಮೀ. ದೂರ ಸಾಧನೆ ಮಾಡಿದರು. ಈ ಮೂಲಕ ತಮ್ಮದೇ ಹೆಸರಿನಲ್ಲಿದ್ದ ವಿಶ್ವದಾಖಲೆ (68.62 ಮೀ.) ಉತ್ತಮಪಡಿಸಿಕೊಂಡರು.

ಪುಷ್ಪೇಂದ್ರ ಅವರು ಎಫ್43 ವಿಭಾಗದ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ 61.60 ಮೀ. ಸಾಧನೆಯೊಂದಿಗೆ ವಿಶ್ವದಾಖಲೆ ಸ್ಥಾಪಿಸಿದರು.

ಈ ಸಾಧನೆ ಮೂಲಕ ಇವರಿಬ್ಬರು ಇದೇ ವರ್ಷ ನಡೆಯಲಿರುವ ವಿಶ್ವ ಪ್ಯಾರಾ ಅಥ್ಲೆಟಿಕ್ ಚಾಂಪಿಯನ್ಷಿಪ್ಗೆ ಅರ್ಹತೆ ಗಳಿಸಿದರು.

ನೀರಜ್ ಯಾದವ್ ಅವರು ಎಫ್55 ವಿಭಾಗದ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ 38.51 ಮೀ. ಸಾಧನೆ ಮೂಲಕ ತಮ್ಮದೇ ಹೆಸರಿನಲ್ಲಿದ್ದ ಏಷ್ಯನ್ ದಾಖಲೆ ಉತ್ತಮಪಡಿಸಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.