ಪ್ಯಾರಿಸ್: ಒಲಿಂಪಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಂಡಿರುವ ಇಸ್ರೇಲ್ನ ಮೂವರು ಅಥ್ಲೀಟ್ಗಳಿಗೆ ಬೆದರಿಕೆ ಎದುರಾಗಿರುವುದಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಪ್ಯಾರಿಸ್ ಪ್ರಾಸಿಕ್ಯೂಟರ್ ಕಚೇರಿ ತಿಳಿಸಿದೆ.

ಅಥ್ಲೀಟ್ಗಳ ವೈಯಕ್ತಿಕ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಶುಕ್ರವಾರ ಬಿಡುಗಡೆ ಮಾಡಿರುವುದರ ಬಗ್ಗೆ ಸೈಬರ್ ಅಪರಾಧ ತಡೆ ಅಧಿಕಾರಿಗಳೂ ತನಿಖೆ ನಡೆಸುತ್ತಿದ್ದಾರೆ. ಮಾಹಿತಿಯನ್ನು ಡಿಲೀಟ್ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದೂ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ.

ಇರಾನ್ ಮೂಲದ ಹ್ಯಾಕರ್ಗಳು ಇಸ್ರೇಲ್ ಸದಸ್ಯರ ಮಾಹಿತಿಗಳನ್ನು ಬಿಡುಗಡೆ ಮಾಡಲು ಹಾಗೂ ಬೆದರಿಕೆ ಒಡ್ಡಲು ಸಾಮಾಜಿಕ ಮಾಧ್ಯಮಗಳಲ್ಲಿ ಚಾನೆಲ್ಗಳನ್ನು ರಚಿಸಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದು ಇಸ್ರೇಲ್ನ ರಾಷ್ಟ್ರೀಯ ಸೈಬರ್ ನಿರ್ದೇಶನಾಲಯ ಗುರುವಾರ ಹೇಳಿಕೆ ಬಿಡುಗಡೆ ಮಾಡಿತ್ತು.

ಒಲಿಂಪಿಕ್ ಕ್ರೀಡಾಕೂಟದ ವೇಳೆ ತಮ್ಮ ದೇಶದ ಅಥ್ಲೀಟ್ಗಳು ಹಾಗೂ ಪ್ರವಾಸಿಗರನ್ನು ಗುರಿಯಾಗಿಸಿ ಇರಾನ್ ಬೆಂಬಲಿತ ಸಂಚು ನಡೆಯುವ ಸಾಧ್ಯತೆ ಇದೆ ಎಂದು ಇಸ್ರೇಲ್ ವಿದೇಶಾಂಗ ಸಚಿವರು ಅದೇ ದಿನ ಫ್ರಾನ್ಸ್ಗೆ ಎಚ್ಚರಿಕೆ ನೀಡಿದ್ದರು.

ಒಲಿಂಪಿಕ್ನಲ್ಲಿ ಪಾಲ್ಗೊಂಡಿರುವ ಇಸ್ರೇಲ್ ಅಥ್ಲೀಟ್ಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕ್ರೀಡಾಕೂಟದುದ್ದಕ್ಕೂ 24 ಗಂಟೆ ರಕ್ಷಣೆ ನೀಡಲಾಗುವುದು ಎಂದು ಪ್ಯಾರಿಸ್ ಅಧಿಕಾರಿಗಳು ತಿಳಿಸಿದ್ದಾರೆ. ಇಸ್ರೇಲ್ ಆಂತರಿಕ ಭದ್ರತಾ ಏಜೆನ್ಸಿ 'ಶಿನ್ ಬೆಟ್' ಕೂಡ ನೆರವಾಗುತ್ತಿದೆ.

'ಫ್ರೆಂಚ್ ಆಡಳಿತ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಆ ಮೂಲಕ, ಅಥ್ಲೀಟ್ಗಳನ್ನು ಬೆದರಿಸುವ ಯತ್ನ ಮಾಡುತ್ತಿರುವ ವ್ಯಕ್ತಿಗಳಿಗೆ ಮತ್ತು ಸಂಘಟನೆಗಳಿಗೆ ಸ್ಪಷ್ಟ ಸಂದೇಶ ರವಾನಿಸಿದೆ' ಎಂದು ಇಸ್ರೇಲ್ ರಾಜತಾಂತ್ರಿಕ ಮೂಲಗಳು ಹೇಳಿವೆ.
.Paris Olympics 2024: ಏರ್ ಪಿಸ್ತೂಲ್ ಮಹಿಳಾ ವಿಭಾಗದಲ್ಲಿ ಭಾರತಕ್ಕೆ ಕಂಚು.Paris Olympics | ಭಾರತಕ್ಕೆ ಇಂದು ಅರ್ಜೆಂಟೀನಾ ಸವಾಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.