ಪ್ಯಾರಿಸ್: ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ಪುರುಷರ 57 ಕೆ.ಜಿ ಫ್ರೀಸ್ಟೈಲ್ ವಿಭಾಗದಲ್ಲಿ ಭಾರತದ ಅಮನ್ ಸೆಹ್ರಾವತ್ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದ್ದಾರೆ.

ಇಂದು ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ 21 ವರ್ಷದ ಅಮನ್ ಅವರು ನಾರ್ತ್ ಮ್ಯಾಸೆಡೋನಿಯಾದ ವ್ಲಾಡಿಮಿರ್ ಎಗೊರೊವ್ ವಿರುದ್ಧ 10-0 ಅಂತರದ ಗೆಲುವು ದಾಖಲಿಸಿದ್ದಾರೆ.

ಇನ್ನೂ ಕೆಲವೇ ಹೊತ್ತಿನಲ್ಲಿ ಸೆಹ್ರಾವತ್, ಕ್ವಾರ್ಟರ್ ಫೈನಲ್‌ನಲ್ಲಿ ಮತ್ತೆ ಕಣಕ್ಕಿಳಿಯಲಿದ್ದಾರೆ.

ಜ್ಯೋತಿ ಸವಾಲು ಅಂತ್ಯ...

ಮತ್ತೊಂದೆಡೆ ಮಹಿಳೆಯರ 100 ಮೀ. ಹರ್ಡಲ್ಸ್‌ನ ರೆಪೆಷಾಜ್ ಸುತ್ತಿನಲ್ಲಿ ಪ್ರಭಾವಿ ಎನಿಸಿಕೊಳ್ಳುವಲ್ಲಿ ಜ್ಯೋತಿ ಯರ್ರಾಜಿ ವಿಫಲರಾಗಿದ್ದಾರೆ.

13.17 ಸೆಕೆಂಡುಗಳಲ್ಲಿ ನಾಲ್ಕನೇಯವರಾಗಿ ಜ್ಯೋತಿ ಗುರಿ ಮುಟ್ಟಿದರು. ಆ ಮೂಲಕ ಸೆಮಿಫೈನಲ್‌ಗೆ ಪ್ರವೇಶಿಸುವಲ್ಲಿ ವಿಫಲರಾಗಿದ್ದಾರೆ.

ರೆಪೆಷಾಜ್ ಸುತ್ತಿನಲ್ಲಿ ಅಗ್ರ ಎರಡು ಸ್ಥಾನ ಪಡೆದ ಸ್ಪರ್ಧಿಗಳು ಸೆಮಿಫೈನಲ್‌ಗೆ ಪ್ರವೇಶಿಸಿದ್ದಾರೆ.

ಈ ಮೊದಲು 24 ವರ್ಷದ ಜ್ಯೋತಿ, ಒಲಿಂಪಿಕ್ಸ್ ಮಹಿಳೆಯರ 100 ಮೀ. ಹರ್ಡಲ್ಸ್‌ನಲ್ಲಿ ಭಾಗವಹಿಸಿದ್ದ ಭಾರತದ ಮೊದಲ ಸ್ಪರ್ಧಿ ಎನಿಸಿದ್ದರು.
.Vinesh Phogat Disqualified | ಭಾರಿ ದೊಡ್ಡ ಸಂಚು ನಡೆದಿದೆ: ವಿಜೇಂದರ್ ಸಿಂಗ್.Paris Olympics: 100 ಗ್ರಾಂ ತೂಕದಿಂದ ಭಾರತದ ಕನಸು ಛಿದ್ರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.