ಪ್ಯಾರಿಸ್: ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದ ಮಹಿಳೆಯರ 76 ಕೆ.ಜಿ. ಫ್ರೀಸ್ಟೈಲ್ ವಿಭಾಗದಲ್ಲಿ ಭಾರತದ ಕುಸ್ತಿಪಟು ರಿತಿಕಾ ಹೂಡಾ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದ್ದಾರೆ.

ಮೊದಲ ಸುತ್ತಿನಲ್ಲಿ ಅದ್ಭುತ ಪ್ರದರ್ಶನ ನೀಡಿರುವ ರಿತಿಕಾ ಅವರು ಹಂಗೇರಿಯ ಬರ್ನಾಡೆಟ್ ನ್ಯಾಗಿ ವಿರುದ್ಧ 12-2ರ ಅಂತರದಲ್ಲಿ ಗೆದ್ದಿದ್ದಾರೆ.

ರಿತಿಕಾ ಎದುರಾಳಿಗಿಂತಲೂ 10 ಅಂಕ ಮುನ್ನಡೆ ಗಳಿಸಿದ ಹಿನ್ನೆಲೆಯಲ್ಲಿ ರೆಫರಿ, ನಿಗದಿತ ಸಮಯಕ್ಕಿಂತಲೂ 29 ಸೆಕೆಂಡಿಗೂ ಮುನ್ನವೇ ಪಂದ್ಯವನ್ನು ಅಂತ್ಯಗೊಳಿಸಿದರು.

ಕ್ವಾರ್ಟರ್‌ನಲ್ಲಿ ರಿತಿಕಾ ಅವರಿಗೆ ಕಠಿಣ ಪೈಪೋಟಿ ಎದುರಾಗಲಿದ್ದು, ಅಗ್ರ ಶ್ರೇಯಾಂಕಿತೆ ಕಿರ್ಗಿಸ್ತಾನದ ಐಪೆರಿ ಮೆಡೆಟ್ ಸವಾಲನ್ನು ಎದುರಿಸಲಿದ್ದಾರೆ. ಈ ಪಂದ್ಯ ಇನ್ನೂ ಕೆಲವೇ ಹೊತ್ತಿನಲ್ಲಿ ನಡೆಯಲಿದೆ.

ಪುರುಷರ ಕುಸ್ತಿ ವಿಭಾಗದಲ್ಲಿ ಭಾರತದ ಏಕಮಾತ್ರ ಸ್ಪರ್ಧಿಯಾಗಿದ್ದ ಅಮನ್ ಸೆಹ್ರಾವತ್, ಶುಕ್ರವಾರ ಕಂಚಿನ ಪದಕ ಜಯಿಸಿದ್ದರು.
.Paris Olympics | ಸೆಹ್ರಾವತ್ ಛಲಕ್ಕೆ ಒಲಿದ ಕಂಚು .ವಿನೇಶ್ ಮೇಲ್ಮನವಿ: ಸಕಾರಾತ್ಮಕ ತೀರ್ಪಿನ ಭರವಸೆ ಎಂದ ಐಒಎ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.