ನವದೆಹಲಿ: ತೂಕ ಕಾಯ್ಡುಕೊಳ್ಳುವಲ್ಲಿ ವಿಫಲರಾಗಿ ಪ್ಯಾರಿಸ್ ಒಲಿಂಪಿಕ್ಸ್ ಫೈನಲ್‌ನಿಂದ ಅರ್ನಹಗೊಂಡಿರುವ ಕುಸ್ತಿಪಟು ವಿನೇಶಾ ಫೋಗಟ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಂತ್ವನದ ಮಾತುಗಳನ್ನು ಹೇಳಿ ಧೈರ್ಯ ತುಂಬಿದ್ದಾರೆ.

‘ವಿನೇಶಾ ಅವರೇ ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್ ಆಗಿದ್ದೀರಿ. ನಿಮ್ಮ ಬಗ್ಗೆ ಭಾರತವು ಹೆಮ್ಮೆ ಪಡುತ್ತದೆ. ಪ್ರತಿಯೊಬ್ಬರಿಗೂ ನೀವು ಸ್ಪೂರ್ತಿಯಾಗಿದ್ದೀರಿ’ ಎಂದು ಮೋದಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

‘ಸ್ಪರ್ಧೆಯಲ್ಲಿ ನಿಮಗೆ ಹಿನ್ನೆಡೆಯಾಗಿರುವುದು ತುಂಬಾ ನೋವಿನ ಸಂಗತಿ. ಈ ಪದಗಳು ನಾನು ಅನುಭವಿಸುತ್ತಿರುವ ಹತಾಶೆಯನ್ನು ವ್ಯಕ್ತಪಡಿಸಬಹುದು. ಆದರೆ, ನೀವು ಈ ಸಂಕಷ್ಟದಿಂದ ಶೀಘ್ರವೇ ಹೊರಬರುತ್ತೀರಿ ಎಂಬುದನ್ನು ನಾನು ಬಲ್ಲೆ. ಸವಾಲುಗಳನ್ನು ಎದುರಿಸುವುದು ನಿಮ್ಮ ಸ್ವಭಾವವಾಗಿದೆ. ನಾವೆಲ್ಲರೂ ನಿಮ್ಮೊಂದಿಗಿದ್ದೇವೆ’ ಎಂದಿದ್ದಾರೆ.

ತೂಕದಲ್ಲಿ 100 ಗ್ರಾಂ ಹೆಚ್ಚಳವಾಗಿದೆ ಎಂಬ ಕಾರಣಕ್ಕೆ ಪ್ಯಾರಿಸ್ ಒಲಿಂಪಿಕ್ಸ್ ಕುಸ್ತಿ ಫೈನಲ್ ಪಂದ್ಯದಿಂದ ವಿನೇಶಾ ಅವರನ್ನು ಅನರ್ಹಗೊಳಿಸಲಾಗಿದೆ ಎಂದು ಭಾರತ ಕುಸ್ತಿ ತಂಡದ ಕೋಚ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಮಂಗಳವಾರ ನಡೆದ 50 ಕೆ.ಜಿ ವಿಭಾಗದ ಮಹಿಳೆಯರ ಕುಸ್ತಿಯ ಸೆಮಿಫೈನಲ್‌ನಲ್ಲಿ ವಿನೇಶಾ 5–0 ಯಿಂದ ಕ್ಯೂಬಾದ ಯುಸೇನೆಯಲಿಸ್ ಗುಜ್ಮನ್ ಲೊಪೇಜ್ ವಿರುದ್ಧ ಗೆದ್ದಿದ್ದರು. ಇಂದು ರಾತ್ರಿ ನಡೆಯುವ ಫೈನಲ್ ಪಂದ್ಯದಲ್ಲಿ ಅಮೆರಿಕದ ಸೆರಾ ಹಿಲ್ದಿಬ್ರೇಟ್ ಅವರನ್ನು ವಿನೇಶಾ ಎದುರಿಸಬೇಕಿತ್ತು.

ಚಿನ್ನ ಜಯಿಸುವ ಅವಕಾಶದಿಂದ ಇದೀಗ ಅವರು ವಂಚಿತರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.