ಮಾಸ್ಕೊ: ಉಕ್ರೇನ್ ವಿರುದ್ಧ ಸೇನಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಈ ವರ್ಷದ ರಷ್ಯನ್ ಗ್ರ್ಯಾನ್ ಪ್ರಿ ಫಾರ್ಮುಲಾ ಒನ್ ರೇಸ್ ರದ್ದುಗೊಳಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಸೋಚಿಯ ಒಲಿಂಪಿಕ್ ಪಾರ್ಕ್‌ನಲ್ಲಿ ಸೆಪ್ಟೆಂಬರ್ 25ರಿಂದ ರೇಸ್ ಆಯೋಜಿಸಲು ಈ ಹಿಂದೆ ತೀರ್ಮಾನಿಸಲಾಗಿತ್ತು.

‘ಉಕ್ರೇನ್‌ನಲ್ಲಿನ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇವೆ. ಘಟನೆಯಿಂದ ಬೇಸರ ಹಾಗೂ ಆಘಾತವಾಗಿದೆ. ಸದ್ಯದ ಪರಿಸ್ಥಿತಿಗೆ ತ್ವರಿತವಾದ ಮತ್ತು ಶಾಂತಿಯುತ ಪರಿಹಾರ ದೊರೆಯುವ ಭರವಸೆ ಇದೆ’ ಎಂದು ಆಯೋಜಕರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಉಕ್ರೇನ್ನಿಂದ ಭಾರತೀಯರ ಕರೆತರಲು ಏರ್ ಇಂಡಿಯಾದಿಂದ 2 ವಿಮಾನಗಳ ಸಂಚಾರ

ಫಾರ್ಮುಲಾ ಒನ್, ಎಫ್‌ಐಎ ಹಾಗೂ ತಂಡಗಳು ರೇಸ್‌ಗೆ ಬೆಂಬಲದ ಕುರಿತು ಗುರುವಾರ ಸಂಜೆ ಮಾತುಕತೆ ನಡೆಸಿದ್ದವು. ಸದ್ಯದ ಪರಿಸ್ಥಿತಿಯಲ್ಲಿ ರಷ್ಯನ್ ಗ್ರ್ಯಾನ್ ಪ್ರಿ ಆಯೋಜಿಸುವುದು ಅಸಾಧ್ಯ ಎಂಬ ತೀರ್ಮಾನಕ್ಕೆ ಬರಲಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.