ನವದೆಹಲಿ: ಎರಡು ಬಾರಿಯ ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್ ಸೈನಾ ನೆಹ್ವಾಲ್ ಅವರು ಏಷ್ಯನ್ ಗೇಮ್ಸ್‌ಗಾಗಿ ನಡೆಯಲಿರುವ ರಾಷ್ಟ್ರೀಯ ಬ್ಯಾಡ್ಮಿಂಟನ್ ಟ್ರಯಲ್ಸ್‌ನಲ್ಲಿ ಭಾಗವಹಿಸುತ್ತಿಲ್ಲ. ಫಿಟ್‌ನೆಸ್ ಸಂಬಂಧಿತ ಸಮಸ್ಯೆಯಿಂದಾಗಿ ಅವರು ಹಿಂದೆ ಸರಿದಿದ್ದಾರೆ.

ತೆಲಂಗಾಣದ ಜ್ವಾಲಾ ಗುಟ್ಟಾ ಅಕಾಡೆಮಿ ಆಫ್ ಎಕ್ಸಲೆನ್ಸ್‌ನಲ್ಲಿ ಮೇ 4 ರಿಂದ 7ರವರೆಗೆ ಆಯ್ಕೆ ಟ್ರಯಲ್ಸ್ ನಡೆಯಲಿದೆ..

ಏಷ್ಯನ್ ಕ್ರೀಡಾಕೂಟ ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 8ರವರೆಗೆ ಚೀನಾ ಹಾಂಗ್‌ಝೌನಲ್ಲಿ ನಡೆಯಲಿದೆ.

‘ಸೈನಾ ನೆಹ್ವಾಲ್ ಅವರು ಫಿಟ್‌ನೆಸ್ ಸಮಸ್ಯೆಯಿಂದಾಗಿ ಟ್ರಯಲ್ಸ್‌ನಲ್ಲಿ ಭಾಗವಹಿಸುತ್ತಿಲ್ಲ. ಪುರುಷರ ಡಬಲ್ಸ್ ಜೋಡಿ ಕುಶಾಲ್ ರಾಜ್– ಪ್ರಕಾಶ್ ರಾಜ್ ಕೂಡ ಟ್ರಯಲ್ಸ್‌ನಿಂದ ಹಿಂದೆ ಸರಿದಿದ್ದಾರೆ. ಟ್ರಯಲ್ಸ್‌ಗೆ ಆಯ್ಕೆಯಾಗಿರುವ ಉಳಿದವರು ಭಾಗವಹಿಸುವರು‘ ಎಂದು ಭಾರತ ಬ್ಯಾಡ್ಮಿಂಟನ್ ಸಂಸ್ಥೆ (ಬಿಎಐ) ಕಾರ್ಯದರ್ಶಿ ಸಂಜಯ್ ಮಿಶ್ರಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.