ಪ್ಯಾರಿಸ್: ವಿಶ್ವದ ಅಗ್ರಗಣ್ಯ ಡಬಲ್ಸ್ ಆಟಗಾರರಾದ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇಲ್ಲಿ ಮಂಗಳವಾರ ಆರಂಭವಾಗುವ ಫ್ರೆಂಚ್ ಓಪನ್ ಸೂಪರ್ 750 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದಾರೆ.

ಭಾರತದ ಜೋಡಿಯು ಕಳೆದ ನವೆಂಬರ್ನಲ್ಲಿ ಚೀನಾ ಮಾಸ್ಟರ್ಸ್, ಮಲೇಷ್ಯಾ ಓಪನ್ ಮತ್ತು ಜನವರಿಯಲ್ಲಿ ಇಂಡಿಯಾ ಓಪನ್ ಟೂರ್ನಿಗಳಲ್ಲಿ ರನ್ನರ್ ಅಪ್ ಸ್ಥಾನ ಪಡೆದಿತ್ತು. 2022ರಲ್ಲಿ ಇಲ್ಲಿ ಚಾಂಪಿಯನ್ ಆಗಿದ್ದ ಸಾತ್ವಿಕ್ – ಚಿರಾಗ್ ಈ ಬಾರಿಯೂ ಗೆಲುವಿನ ಅಭಿಯಾನ ಮುಂದುವರಿಸುವ ತವಕದಲ್ಲಿದ್ದಾರೆ.

ಭಾರತದ ಆಟಗಾರರು 32ರ ಘಟ್ಟದ ಪಂದ್ಯದಲ್ಲಿ ಮಲೇಷ್ಯಾದ ಓಂಗ್ ಯೂ ಸಿನ್ ಮತ್ತು ಟಿಯೋ ಈ ಯಿ ಅವರನ್ನು ಎದುರಿಸಲಿದ್ದಾರೆ.

ಗಾಯದ ಕಾರಣಕ್ಕಾಗಿ ನಾಲ್ಕು ತಿಂಗಳು ವಿಶ್ರಾಂತಿ ಪಡೆದು, ಈಚೆಗಷ್ಟೇ ಕಣಕ್ಕಿಳಿದು ಏಷ್ಯಾ ಟೀಂ ಚಾಂಪಿಯನ್ಷಿಪ್ನಲ್ಲಿ ಐತಿಹಾಸಿಕ ಪ್ರಶಸ್ತಿ ಗೆದ್ದ ಭಾರತ ತಂಡವನ್ನು ಮುನ್ನಡೆಸಿದ್ದ ಪಿ.ವಿ. ಸಿಂಧು ಮತ್ತೆ ಲಯಕ್ಕೆ ಮರಳಿದ್ದಾರೆ. ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಸಿಂಧು ಅವರು ಕೆನಡಾದ ಮಿಚೆಲ್ ಲೀ ವಿರುದ್ಧ ಅಭಿಯಾನ ಆರಂಭಿಸುವರು.

ಪುರುಷರ ಸಿಂಗಲ್ಸ್ನಲ್ಲಿ ವಿಶ್ವದ 7ನೇ ಕ್ರಮಾಂಕದ ಎಚ್.ಎಸ್. ಪ್ರಣಯ್, 19ನೇ ರ್ಯಾಂಕ್ನ ಲಕ್ಷ್ಯ ಸೇನ್, 24ನೇ ರ್ಯಾಂಕ್ನ ಕಿದಂಬಿ ಶ್ರೀಕಾಂತ್ ಅವರು ಇಲ್ಲಿ ಸ್ಪರ್ಧಾಕಣದಲ್ಲಿದ್ದಾರೆ. ಅವರು ಕ್ರಮವಾಗಿ ಚೀನಾದ ಲು ಗುವಾಂಗ್ ಜು, ಜಪಾನ್ನ ಕಾಂತಾ ತ್ಸುನೇಯಮಾ ಮತ್ತು ಚೀನಾ ತೈಪೆಯ ಚೌ ಟಿಯೆನ್ ಚೆನ್ ಅವರನ್ನು ಮೊದಲ ಸುತ್ತಿನಲ್ಲಿ ಎದುರಿಸುವರು.

ಮಹಿಳಾ ಸಿಂಗಲ್ಸ್ನ ಆರಂಭಿಕ ಸುತ್ತಿನಲ್ಲಿ ಭಾರತದ ಟ್ರೀಸಾ ಜೋಳಿ ಮತ್ತು ಗಾಯತ್ರಿ ಗೋಪಿಚಂದ್ ಅವರು ಮೊದಲ ಸುತ್ತಿನಲ್ಲಿ ಸ್ವದೇಶದ ತನಿಶಾ ಕ್ರಾಸ್ಟೊ ಮತ್ತು ಅಶ್ವಿನಿ ಪೊನ್ನಪ್ಪ ಅವರನ್ನು ಎದುರಿಸುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.