ಫೋರ್ಟ್ವರ್ತ್: ಕಾಮನ್ವೆಲ್ತ್ ಗೇಮ್ಸ್ ಕಂಚಿನ ಪದಕ ವಿಜೇತ ಜೋಡಿ ಟ್ರೀಸಾ ಜೋಳಿ ಮತ್ತು ಗಾಯತ್ರಿ ಗೋಪಿಚಂದ್ ಅವರು ಮಂಗಳವಾರ ಆರಂಭವಾಗುವ ಅಮೆರಿಕ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸವಾಲನ್ನು ಮುನ್ನಡೆಸಲಿದ್ದಾರೆ.

ವಿಶ್ವ ರ್ಯಾಂಕಿಂಗ್ನಲ್ಲಿ 24ನೇ ಸ್ಥಾನದಲ್ಲಿರುವ ಟ್ರೀಸಾ– ಗಾಯತ್ರಿ ಜೋಡಿಯು ತಿಂಗಳ ಹಿಂದೆ ನಡೆದ ಸಿಂಗಪುರ ಓಪನ್ನಲ್ಲಿ ಸೆಮಿಫೈನಲ್ ತಲುಪಿತ್ತು. ಇಲ್ಲಿ ಎರಡನೇ ಶ್ರೇಯಾಂಕ ಪಡೆದಿರುವ ಭಾರತದ ಆಟಗಾರ್ತಿಯರು ಮೊದಲ ಸುತ್ತಿನಲ್ಲಿ ಬೈ ಪಡೆದಿದ್ದಾರೆ. ಎರಡನೇ ಸುತ್ತಿನಲ್ಲಿ ಅವರು ಚೀನಾ ತೈಪೆಯ ಹ್ಸೇಹ್ ಪೀ ಶಾನ್ ಮತ್ತು ಹಂಗ್ ಎನ್-ತ್ಸು ಅವರನ್ನು ಎದುರಿಸುವರು.

ಪ್ಯಾರಿಸ್ ಒಲಿಂಪಿಕ್ಸ್ ಕೋಟಾ ಪಡೆದಿರುವ ಪಿ.ವಿ. ಸಿಂಧು, ಎಚ್.ಎಸ್. ಪ್ರಣಯ್, ಲಕ್ಷ್ಯ ಸೇನ್, ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ, ಚಿರಾಗ್ ಶೆಟ್ಟಿ, ಅಶ್ವಿನಿ ಪೊನ್ನಪ್ಪ ಮತ್ತು ತನಿಶಾ ಕ್ರಾಸ್ಟೊ ಅವರು ಈ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

ಪುರುಷರ ಸಿಂಗಲ್ಸ್ನಲ್ಲಿ ಪ್ರಿಯಾಂಶು ರಾಜಾವತ್ ಎಂಟನೇ ಶ್ರೇಯಾಂಕ ಪಡೆದಿದ್ದು, ಅವರು ಝೆಕ್ ರಿಪಬ್ಲಿಕ್ನ ಜಾನ್ ಲೋಡಾ ವಿರುದ್ಧ ಅಭಿಯಾನ ಆರಂಭಿಸುವರು. ಆಯುಷ್ ಶೆಟ್ಟಿ ಮತ್ತು ಎಸ್. ಶಂಕರ್ ಮುತ್ತುಸ್ವಾಮಿ ಸುಬ್ರಮಣಿಯನ್ ಅವರೂ ಕಣಕ್ಕೆ ಇಳಿಯುವರು.

ಮಾಳವಿಕಾ ಬನ್ಸೋಡ್ ಮಹಿಳೆಯರ ಸಿಂಗಲ್ಸ್ನಲ್ಲಿ ಏಳನೇ ಶ್ರೇಯಾಂಕದ ಪಡೆದಿದ್ದು, ಅವರು ಮೊದಲ ಸುತ್ತಿನಲ್ಲಿ ಎಸ್ಟೋನಿಯಾದ ಕ್ರಿಸ್ಟಿನ್ ಕುಬಾ ಅವರನ್ನು ಎದುರಿಸುವರು. ತಾನ್ಯಾ ಹೇಮಂತ್ ಕೂಡ ಸ್ಪರ್ಧಾಕಣದಲ್ಲಿ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.